ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ,13: ದಾವಣಗೆರೆ ತಾಲ್ಲೂಕು ಚಟ್ಟೋಬನಹಳ್ಳಿ ತಾಂಡ ಹಾಗೂ ನರಗನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನ ಪರಿಣಾಮಕಾರಿಗೊಳಿಸಲು ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸಬೇಕು. ಚಟ್ಟೋಬನಹಳ್ಳಿ ತಾಂಡ ಗ್ರಾಮ ವ್ಯಾಪ್ತಿಗೆ ಮಂಜೂರು ಮಾಡಲು ಉದ್ದೇಶಿಸಲಾಗಿರುವ ಹೊಸ ನ್ಯಾಯಬೆಲೆ ಅಂಗಡಿಗೆ 10-ಅಂತ್ಯೋದಯ, 94-ಬಿಪಿಎಲ್, ಎಪಿಎಲ್-0 ಸೇರಿದಂತೆ ಒಟ್ಟು 104 ಪಡಿತರ ಚೀಟಿಗಳನ್ನು ನಿಯೋಜಿಸುವ ಉದ್ದೇಶ ಹೊಂದಲಾಗಿದೆ. ನರಗನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ವ್ಯಾಪ್ತಿಗೆ ಮಂಜೂರು ಮಾಡಲು ಉದ್ದೇಶಿಸಲಾಗಿರುವ ಹೊಸ ನ್ಯಾಯಬೆಲೆ ಅಂಗಡಿಗೆ 10-ಅಂತ್ಯೋದಯ, 100-ಬಿಪಿಎಲ್, ಎಪಿಎಲ್-0 ಸೇರಿದಂತೆ ಒಟ್ಟು 110 ಪಡಿತರ ಚೀಟಿಗಳನ್ನು ನಿಯೋಜಿಸುವ ಉದ್ದೇಶ ಹೊಂದಲಾಗಿದೆ.
ಸಹಕಾರ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೊಂದಾಯಿತವಾಗಿರಬೇಕು. ಕನಿಷ್ಠ ಎರಡು ಲಕ್ಷ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು.

ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿ ಅಥವಾ ತಹಶೀಲ್ದಾರ್, ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಅರ್ಜಿದಾರರು ಅರ್ಜಿ ನಮೂನೆ ‘ಎ’, ಸಹಕಾರ ಸಂಘ/ಸಂಸ್ಥೆಗಳ ಮತ್ತು ಸ್ವಸಹಾಯ ಸಂಘಗಳಾದರೆ ನೋಂದಾವಣೆ ಪತ್ರ, ಕಳೆದ 3 ವರ್ಷಗಳ ದೃಡಿಕರಣ ಲೆಕ್ಕ ಪರಿಶೋಧನಾ ವರದಿ ಮತ್ತು ಉಪನಿಯಮಗಳು(ಬೈಲಾ), ನ್ಯಾಯಬೆಲೆ ಅಂಗಡಿ ನಡೆಸಲು ಮತ್ತು ಪ್ರಮಾಣ ಪತ್ರ ಸಲ್ಲಿಸಲು ಅಧಿಕಾರ ಪಡೆದಿರುವ ಪ್ರತಿನಿಧಿಯನ್ನು ನೇಮಿಸಿರುವ ಬಗ್ಗೆ ನಿರ್ಣಯ, ಕರ್ನಾಟಕ ಸೊಸೈಟೀಸ್ ರಿಜೀಸ್ಟ್ರೇಷನ್ ಆಕ್ಟ್ 1959 ಅಡಿ ವಿಚಾರಣೆ, ಟ್ರಯಲ್ ಮತ್ತು ಲಿಕ್ವಿಡೇಷನ್ ನಡವಳಿ ನಡೆದಿರುವುದಿಲ್ಲ. ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಡೀಕರಣ ಪತ್ರ, ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ/ಕರಾರು ಪತ್ರ, ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ(ನಿಯಂತ್ರಣಾ) (2ನೇ ತಿದ್ದುಪಡಿ) ಆದೇಶ 2017 ಮತ್ತು 2018ರಡಿಯಲ್ಲಿ ಆದ್ಯತೆಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top