ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಇದೀಗ ಮದ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಅರವಿಂದ್ ಕೇಜ್ರಿವಾಲ್, ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ೭ ದಿನಗಳವರೆಗೆ ವಿಸ್ತರಿಸುವಂತೆ ಸುಪ್ರೀಂಕರ‍್ಟ್ಗೆ ರ‍್ಜಿ ಸಲ್ಲಿಸಿದ್ದಾರೆ.

ಮಧ್ಯಂತರ ಜಾಮೀನು ಅವಧಿ ೭ ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ‍ಗೆ ಮನವಿ ಮಾಡಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಕಿಂಗ್ಪಿನ್ ಎನ್ನುವ ಆರೋಪ ಹೊತ್ತಿರುವ ಅರವಿಂದ್ ಕೇಜ್ರಿವಾಲ್ಗೆ ಇತ್ತೀಚೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.

ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ೭ ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದಾರೆ. ಸುಪ್ರೀಂ ಕರ‍್ಟ್ ಜೂನ್ ೧ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ ೨ ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

ನಡೆಯುತ್ತಿರುವ ಸರ‍್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ ೨ ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ.

ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಬಗ್ಗೆ ಸುಪ್ರೀಂಕರ‍್ಟ್ ಹೇಳಿದ್ದೇನು? ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡುವ ಸಂರ‍್ಭದಲ್ಲಿ ಸುಪ್ರೀಂಕರ‍್ಟ್, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನರ‍್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ. ಅವರು ಸಮಾಜಕ್ಕೆ ಬೆದರಿಕೆಯಲ್ಲ, ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಸೂಚಿಸಿತ್ತು.

ಮೇ ೧೭ ರಂದು, ಜಾರಿ ನರ‍್ದೇಶನಾಲಯವು (ಇಡಿ) ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ರ‍್ಜಿಯ ತರ‍್ಪನ್ನು ಸುಪ್ರೀಂ ಕರ‍್ಟ್ ಕಾಯ್ದಿರಿಸಿತ್ತು. ಈ ವೇಳೆ ಸಾಮಾನ್ಯ ಜಾಮೀನಿಗಾಗಿ ಕೆಳ ನ್ಯಾಯಾಲಯವನ್ನು ಸಂರ‍್ಕಿಸಲು ನ್ಯಾಯಾಲಯ ಅವರಿಗೆ ಅನುಮತಿ ನೀಡಿತ್ತು.

 ಕೇಜ್ರಿವಾಲ್ ಅಲ್ಲದೆ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖಾ ಸಂಸ್ಥೆ ಮನೀಶ್ ಸಿಸೋಡಿಯಾ ಅವರನ್ನು ಕೂಡ ಬಂಧಿಸಿದೆ. ಅವರು ಈಗ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನೂ ಬಂಧಿಸಲಾಗಿತ್ತು. ಆದರೆ, ಅವರು ಸುಪ್ರೀಂ ಕರ‍್ಟ್‌ನಿಂದ ಜಾಮೀನು ಪಡೆದಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top