ಪ್ರಯಾಗ್ರಾಜ್: ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರದ ನಡುವೆ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಹಲವರು ಗಾಯಗೊಂಡು, 15 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಎರಡನೇ ಅಮೃತಸ್ನಾನದ ದಿನವಾದ ಬುಧವಾರ ಲಕ್ಷಾಂತರ ಭಕ್ತರು ಪ್ರಯಾಗ್ರಾಜ್ ಯಾತ್ರೆ ಕೈಗೊಂಡಿರುವುದರಿAದ ಭಾರಿ ಜನದಟ್ಟಣೆ ಕಂಡುಬAದಿದೆ. ಕಾಲ್ತುಳಿತದಲ್ಲಿ ಗಾಯಗೊಂಡಿರುವ ಹಲವರ ಪೈಕಿ ಕೆಲವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ, ಮುರಿಯುವಂತೆ ಮಾಡಿದ್ದಾರೆ. ಇದರಿಂದ ಕಾಲ್ತುಳಿತ ಎದುರಾಗಿ ಕೆಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆ ವರದಿಯಾದ ಬೆನ್ನಲ್ಲೇ 2ನೇ ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.
ಘಟನೆ ಬೆನ್ನಲ್ಲೇ ಪ್ರಯಾಗ್ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ಮಾತುಕತೆ ನಡೆಸಿದ್ದು, ಶೀಘ್ರಗತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಕೂಡ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಕೇಂದ್ರದಿAದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಗಮಕ್ಕೆ ತೆರಳುವ ಬದಲು ಗಂಗಾನದಿ ಸಮೀಪದಲ್ಲಿರುವ ಘಾಟ್‌ನಲ್ಲಿ ಸ್ನಾನ ಮಾಡುವಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಭಕ್ತರು ಆಡಳಿತ ಮಂಡಳಿಯ ಸೂಚನೆಗಳನ್ನು ಪಾಲಿಸಬೇಕು ಮತ್ತು ಕಾನೂವು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು, ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಹೇಳಿದ್ದಾರೆ.
ಜನವರಿ 13ರಂದು ಆರಂಭವಾದ ಮಹಾಕುಂಭ ಮೇಳಕ್ಕೆ ಈ ಬಾರಿ ಅತ್ಯಧಿಕ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಇದುವರೆಗೆ ಸುಮಾರು 15 ಕೋಟಿ ಮಂದಿ ಸಂಗಮಕ್ಷೇತ್ರದಲ್ಲಿ ಪವಿತ್ರಸ್ನಾನ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವ “ಮಹಾ ಕುಂಭಮೇಳ” ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿದ್ದು, ಈ ಕುಂಭಮೇಳವು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮೇಳವಾಗಿದೆ. ಕುಂಭಮೇಳಕ್ಕೆ ಪ್ರಪಂಚದಾದ್ಯAತದ ಸಾಧು-ಸಂತರು ಮತ್ತು ಭಕ್ತ ಸಾಗರವೇ ಹರಿದುಬರುತ್ತಿದೆ.
10 ಸಾವಿರ ಎಕರೆಗಳಲ್ಲಿ ಕುಂಭಮೇಳಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಮಾಡಿರುವ ಉತ್ತರ ಪ್ರದೇಶ ಸರ್ಕಾರ, ಧಾರ್ಮಿಕ ಆಚರಣೆಗೆ ಆಗಮಿಸುವ ಕೋಟ್ಯಂತರ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಹಲವು ಕ್ರಮಗಳು ಹಾಗೂ ವಿಶೇಷ ಸೌಲಭ್ಯಗಳನ್ನು ಒದಗಿಸಿದೆ.