ವಿಜಯನಗರ ಜಿಲ್ಲೆಯಲ್ಲಿ ಗಾಂಜಾ ಪೆಡ್ಲರ್ ಗಳ ಮೇಲೆ ದಾಳಿ

ಹೊಸಪೇಟೆ : ವಿಜಯನಗರ ಜಿಲ್ಲೆಯಾದ್ಯಂತ ಗಾಂಜಾ ರೈಡ್ ಮಾಡಿದ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ 9 ಪ್ರಕರಣಗಳು ದಾಖಲು ಮಾಡಿದ್ದಾರೆ.

 

ಜಿಲ್ಲೆಯ ನಾನಾ ಕಡೆಗಳಲ್ಲಿ ದಾಳಿ ನಡೆಸಿದ ಪೊಲೀಸರು ಪ್ರತ್ಯೇಕ ಪ್ರಕರಣಗಳ ದಾಖಲು ಮಾಡಿಕೊಂಡಿದ್ದು, ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದವರು ಸೇರಿ ಒಟ್ಟು 19 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಸುಮಾರು 2.52 ಲಕ್ಷ ರೂ. ಮೌಲ್ಯದ 5.22 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. 

ಅಲ್ಲದೆ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಗಾಂಜಾ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮತ್ತು ಸೇವನೆ ಮಾಡುತ್ತಿದ್ದ 6 ಜನರನ್ನು ಬಂಧಿಸಿದ್ದಾರೆ. ಹೊಸಪೇಟೆ ಪಟ್ಟಣ ಠಾಣೆ, ಗ್ರಾಮೀಣ ಠಾಣೆ ಮತ್ತು ಚಿತ್ತವಾಡ್ಗಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

 

ಮಾದಕ ದ್ರವ್ಯ ಮತ್ತು ವಸ್ತುಗಳ ಅಕ್ರಮ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಡಿ.21 ರಿಂದ 31ರವರೆಗೆ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಮಾಡಲಾಗಿತ್ತು. ಅಂತೆಯೇ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ವಿಜಯನಗರ ಎಸ್ಪಿ ಬಿ.ಎಲ್. ಶ್ರೀಹರಿಬಾಬು  ಮಾಹಿತಿ ನೀಡಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top