ಹಿಟ್‌ & ರನ್‌ ಪ್ರಕರಣದ ತಿದ್ದುಪಡಿ ವಿರೋಧಿಸಿ ಅನಿರ್ದಿಷ್ಟಾವಧಿ ಬಂದ್‌ ಸಂದರ್ಭದಲ್ಲಿ ಲಾರಿ ಮಾಲೀಕರ ಮೇಲೆ ಹಲ್ಲೆ

ತಪ್ಪಿತಸ್ಥರ ಮೇಲೆ ಕ್ರಮಕ್ಕೆ ರಾಷ್ಟ್ರೀಯ ವಾಹನ ಚಾಲಕರ ಒಕ್ಕೂಟ ಆಗ್ರಹ

 

ಬೆಂಗಳೂರು :  ಹಿಟ್ ಅಂಡ್ ರನ್  ಪ್ರಕರಣದಲ್ಲಿ 10 ವರ್ಷ ಜೈಲು ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸುವ ಕೇಂದ್ರ ಸರ್ಕಾರದ ರಸ್ತೆ ಸಂಚಾರಿ ಕಾನೂನು ತಿದ್ದುಪಡಿ ವಿರೋಧಿಸಿ ಲಾರಿ ಮಾಲೀಕರ ಸಂಘಟನೆಗಳು ಕರೆ ನೀಡಿರುವ ಬಂದ್‌ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದ ಲಾರಿ ಚಾಲಕರ ಮೇಲೆ ರಾಜ್ಯದ ಕೆಲವೆಡೆ ದಾಳಿ ನಡೆಯುತ್ತಿದ್ದು, ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಕ್ಷಣವೇ ಮಧ್ಯಪ್ರವೇಶಿಸಿ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಅಮಾಯಕ ಚಾಲಕರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಚಿತ್ರದುರ್ಗ ಸೇರಿದಂತೆ ಕೆಲವೆಡೆ ಅಗತ್ಯ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಚಾಲಕರ ಮೇಲೆ ಹಲ್ಲೆ ನಡೆಸಲಾಗಿದೆ. ಬಂದ್‌ ಗೆ ಬೆಂಬಲ ನೀಡುವಂತೆ ಚಾಲಕರಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಲಾರಿ ಮಾಲೀಕರ ಒತ್ತಡದಿಂದ ಚಾಲಕರು ವಾಹನ ಚಾಲನೆ ಮಾಡುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಅಲ್ಲದೇ ಚಾಲಕರಿಗೆ ಮಾಹಿತಿ ಕೊರತೆ ಕೂಡ ಇದೆ ಎಂದಿದ್ದಾರೆ.

ರಾಜ್ಯದಲ್ಲಿ ಇಂಧನ, ಹಾಲು, ತರಕಾರಿ, ದಿನೋಪಯೋಗಿ ವಸ್ತುಗಳು ಮತ್ತು ಔಷಧಿಗಳ ವಾಹನಗಳನ್ನು ತಡೆಯಬಾರದು. ತಡೆದರೆ ಅಂತವರ ವಿರುದ್ಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top