ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ನಾಗೇಂದ್ರ
ಚಾಮರಾಜನಗರ : ಸಚಿವರಾದ ಬಿ ನಾಗೇಂದ್ರ ಅವರು ಚಾಮರಾಜನಗರ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಸ್ಥಿತಿಗತಿಗಳನ್ನು ವಿಚಾರಿಸಿ ಅಪಘಾತದ ವಿವರ ಪಡೆದರು.
ಮೃತ ಕುಟುಂಬಸ್ಥರಿಗೆ ಶ್ರೀರಾಮುಲು ಸಾಂತ್ವನ
ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮಕ್ಕೆ ತೆರಳಿ ಅಪಘಾತದಲ್ಲಿ ಮೃತಪಟ್ಟವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಮತ್ತು ಹಿರಿಯರಿಗೆ ಸಾಂತ್ವಾನ ಹೇಳಲಾಯಿತು. ಸಾವಿನ ದುಃಖ ಭರಿಸುವ ಶಕ್ತಿ ಆ ಕುಟುಂಬಕ್ಕೆ ದೇವರು ನೀಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಾರ್ಥಿಸಿದರು.
ಬಿಪಿಎಲ್ ಕಾರ್ಡ್: ಜೂ.1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು: ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ.
ಭೀಕರ ರಸ್ತೆ ಅಪಘಾತ: 10 ಜನ ಸಾವು
ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಸುಮಾರು 10 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದಿದೆ.
ಘಮ ಘಮಿಸಿದ ವೆರೈಟಿ ಮಾವು, ಹಲಸು
ರಾಜ್ಯದಲ್ಲಿ ಮಾವು ಹಾಗೂ ಹಲಸು ಹಣ್ಣಿನ ಋತುಮಾನ ಆರಂಭವಾಗಿದ್ದು, ಈಗ ಹಣ್ಣಿನ ಸುಗ್ಗಿ ನಡೆಯುತ್ತಿದೆ.
ವರ್ಷಕ್ಕೊಮ್ಮೆ ಬೆಳೆಯುವ ಹಣ್ಣುಗಳ ರಾಜ ಮಾವಿನ ಹಣ್ಣನ್ನು ಕಡಿಮೆ ಬೆಲೆಗೆ ಖರೀದಿಸಿ ತಿನ್ನಲು ಮಾವು ಮೇಳವನ್ನೇ ಆಯೋಜನೆ.
ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಂಠಿತ
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲುಕಿನಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಪ್ರಮಾಣವೂ ಇಳಿಮುಖವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಂತೆ ಈ ವರ್ಷವೂ ಸಹ ಮಳೆ ಬೀಳಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ.
ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು IPL ಫೈನಲ್ || ಮೀಸಲು ದಿನ ಕೂಡ ಮಳೆ ಬಂದರೆ ಯಾರಾಗಲಿದ್ದಾರೆ ಚಾಂಪಿಯನ್..?
ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಇಂದು ಸೋವವಾರಕ್ಕೆ ಮುಂದೂಡಲಾಗಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಇದರಿಂದಾಗಿ ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು.
ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು
ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.