Author name: Sharan@scybertechs.com

Avatar

ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯದವರನ್ನೇ ಕಣಕ್ಕಿಳಿಸಬೇಕು

ಬೆಂಗಳೂರು ; ಟಿಕೆಟ್ ಹಂಚಿಕೆ ಕುರಿತು ಹೈಕಮಾಂಡ್ ಮುಂದೆ ನಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತೇವೆ. ನಂತರ ಹೈಕಮಾಂಡ್ ನಿರ್ಧಾರ ಕೈಗೊಳ್ಳುವುದು ಕಾಂಗ್ರೆಸ್ ಪದ್ಧತಿ. ನೂರಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಎಲ್ಲರ ಹೆಸರನ್ನು ಹೈಕಮಾಂಡ್ಗೆ ಕಳುಹಿಸಿಕೊಟ್ಟಿದ್ದೇವೆ. ಜತೆಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ನಾವು ಕೇವಲ ಶಿಫಾರಸು ಮಾಡುತ್ತೇವೆ. ಆದರೆ ಇಂತಹವರಿಗೆ ಟಿಕೆಟ್ ನೀಡಿ ಎಂದು ಹೇಳುವುದಿಲ್ಲ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಒಮ್ಮತದ ಶಿಫಾರಸು ಮಾಡಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ …

ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯದವರನ್ನೇ ಕಣಕ್ಕಿಳಿಸಬೇಕು Read More »

ಬುಡಾ ಕಚೇರಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಲೀಕರೊಂದಿಗೆ “ಬಳ್ಳಾರಿ ಅಭಿವೃದ್ಧಿ” ಕುರಿತು ಸಚಿವ ಬಿ.ಶ್ರೀರಾಮುಲು ಚರ್ಚೆ

ಬಳ್ಳಾರಿ: ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ‌ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು‌ ಬುಡಾ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಸಭೆ ನಡೆಸಿದರು. ಬಳ್ಳಾರಿ ನಗರದ ಅಭಿವೃದ್ಧಿ ಮತ್ತು ಸೌಂದರೀಕರಣಕ್ಕೆ ಸಂಬಂಧಿಸಿದಂತೆಯೂ ರಿಯಲ್ ಎಸ್ಟೇಟ್ ಮಾಲೀಕರೊಂದಿಗೆ ಚರ್ಚಿಸಿದರು ಮತ್ತು ಅವರ ಸಮಸ್ಯೆಗಳನ್ನು ಆಲಿಸಿದರು. ರಿಯಲ್ ಎಸ್ಟೇಟ್ ಮಾಲೀಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ನಿಯಾಮನುಸಾರ ಕ್ಷಿಪ್ರಗತಿಯಲ್ಲಿ ಕ್ರಮವಹಿಸುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ, ಬುಡಾ ಅಧ್ಯಕ್ಷ …

ಬುಡಾ ಕಚೇರಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಲೀಕರೊಂದಿಗೆ “ಬಳ್ಳಾರಿ ಅಭಿವೃದ್ಧಿ” ಕುರಿತು ಸಚಿವ ಬಿ.ಶ್ರೀರಾಮುಲು ಚರ್ಚೆ Read More »

2 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಲೇಜು ನವೀಕರಣ ಕಾರ್ಯಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಂದ ಚಾಲನೆ

ಪಾದರಾಯನಪು ; ಪಾದರಾಯನಪುರದ ಬಿಬಿಎಂಪಿ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನವೀಕರಣ ಕಾಮಗಾರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಇಂದು ಚಾಲನೆ ನೀಡಿದರು.ಒಟ್ಟು 2 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿರುವ ಕಾಮಗಾರಿಯಡಿ, ಹೊಸದಾಗಿ 6 ಕೊಠಡಿಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಮಹಿಳೆಯರಿಗೆ, ಪುರುಷರಿಗೆ‌ ಮತ್ತು ವಿಕಲಚೇತನರಿಗೆ 8 ಪ್ರತ್ಯೇಕ ಶೌಚಾಲಯಗಳು, ಅತ್ಯಾಧುನಿಕ ಕ್ರೀಡಾ ಸಂಕೀರ್ಣ, ಬ್ಯಾಡ್ಮಿಂಟನ್ ಅಂಕಣ ಸೇರಿದಂತೆ ಕಾಲೇಜನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದರು.

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ

ಲಂಡನ್: ಕರ್ನಾಟಕದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಆಯ್ದ 1,000 ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಯನ್ನು ಒದಗಿಸಲು ಮತ್ತು ಶಾಲಾ ವಿದ್ಯಾರ್ಥಿಗಳ ಮಟ್ಟದಲ್ಲಿ ಸಂಪೂರ್ಣವಾಗಿ ಈ ಕಾರ್ಯಕ್ರಮವನ್ನು ವಿಸ್ತರಿಸಲು ಇಲ್ಲಿನ ಅನಲಿಟಿಕ್ಸ್ ಇನ್ಸ್ಟಿಟ್ಯೂಟ್ (ಐಒಎ) ತೀವ್ರ ಆಸಕ್ತಿ ವ್ಯಕ್ತಪಡಿಸಿದೆ.ಇಲ್ಲಿ ನಡೆಯುತ್ತಿರುವ ವರ್ಲ್ಡ್ ಎಜುಕೆಷನ್ ಫೋರಂ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣಅವರನ್ನು ಭೇಟಿ ಆ ಸಂಸ್ಥೆಯ ಉನ್ನತಾಧಿಕಾರಿಗಳ ನಿಯೋಗ ಈ ವಿಚಾರವನ್ನು ಹಂಚಿಕೊಂಡಿದೆ.ಸಚಿವರೊಂದಿಗೆ ಮಾತುಕತೆ ನಡೆಸಿದ ಅನಲಿಟಿಕ್ಸ್ ಐಒಎ ಪ್ರತಿನಿಧಿ ಡಾ.ಕ್ಲೇರ್ ವಾಲ್ಶ್, …

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ Read More »

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ

ಕೊಪ್ಪಳ,: ಈ ವರ್ಷ ಕೊಪ್ಪಳದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅಪಾರ ಹಾನಿಯೂ ಸಂಭವಿಸಿದೆ. ಶಾಸಕರು, ಅಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಪರಿಹಾರ ಒದಗಿಸುವ ಭರವಸೆ ಕೊಟ್ಟರು. ಕೊಪ್ಪಳ ತಾಲೂಕಿನ ಹಿರೇಹಳ್ಳ ಜಲಾಶಯ ಒಂದೇ ದಿನದಲ್ಲಿ ಭರ್ತಿಯಾಗಿದ್ದು ಶುಕ್ರವಾರ ನಾಲ್ಕು ಗೇಟುಗಳ ಮೂಲಕ ಅಪಾರ ಪ್ರಮಾಣದ ನೀರು ಹೊರಬಿಡಲಾಗಿದೆ. ಹಿರೇಹಳ್ಳದುದ್ದಕ್ಕೂ ಅಲ್ಲಲ್ಲಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ತುಂಬಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಎರಡು …

ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ Read More »

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ

ಬೆಂಗಳೂರು: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ …

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ ಎಫ್.ಡಿ.ಐ ಹರಿದುಬಂದಿದೆ: ಬೊಮ್ಮಾಯಿ Read More »

11 ಸಾವಿರ ಜನ ಬಿಸಿಯೂಟ ಕಾರ್ಯಕರ್ತರ ಬೆಂಬಲಕ್ಕೆ ನಿಂತ ಡಿ.ಕೆ ಶಿವಕುಮಾರ್

ಬೆಂಗಳೂರು: 60 ವರ್ಷ ಪೂರ್ಣಗೊಂಡಿದೆ ಎನ್ನುವ ಕಾರಣ ನೀಡಿ ಯಾವುದೇ ರೀತಿಯ ನಿವೃತ್ತಿ ಸೌಲಭ್ಯವನ್ನು ನೀಡದೇ ಸುಮಾರು 11 ಸಾವಿರ ಬಿಸಿಯೂಟ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡುವ ಮೂಲಕ ಖಂಡಿಸಿದ್ದಾರೆ. “ಯಾವುದೇ ನಿವೃತ್ತಿ ಭತ್ಯೆ ಹಾಗೂ ಪಿಂಚಣಿ ಸೌಲಭ್ಯಗಳನ್ನು ನೀಡದೆ ರಾಜ್ಯದ 11 ಸಾವಿರ ಬಿಸಿಯೂಟ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ದಶಕಗಳಿಂದ ನಮ್ಮ ಮಕ್ಕಳ ಪಾಲನೆ, ಪೋಷಣೆ ಮಾಡಿದವರನ್ನು ʼನಾಳೆಯಿಂದ ಬರುವ ಅವಶ್ಯಕತೆ ಇಲ್ಲʼ …

11 ಸಾವಿರ ಜನ ಬಿಸಿಯೂಟ ಕಾರ್ಯಕರ್ತರ ಬೆಂಬಲಕ್ಕೆ ನಿಂತ ಡಿ.ಕೆ ಶಿವಕುಮಾರ್ Read More »

ನೂತನ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬಳ್ಳಾರಿ: ಸಂಡೂರು ತಾಲೂಕಿನ ಚೋರನೂರು ಗ್ರಾಮದಲ್ಲಿ 3.58 ಕೋಟಿ ರೂ.ವೆಚ್ಚದಲ್ಲಿ ನೂತನ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅತ್ಯಾಧುನಿಕ ಪೋಲಿಸ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಸ್ಮಾರ್ಟ್ ಪೋಲಿಸ್ಸಿಂ ಗ್‍ನಿಂದ ಅಪರಾಧ ತಡೆ, ಜನರ ಸುರಕ್ಷತೆ, ರಸ್ತೆ ಸುರಕ್ಷತೆ ಸೇರಿದಂತೆ ತಮ್ಮ ಕೆಲಸವನ್ನು ಪೋಲಿಸ್ ಪಡೆಗಳು ಇನ್ನಷ್ಟು ಪರಿಣಾಮಕಾರಿಯಾಗಿ …

ನೂತನ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

Translate »
Scroll to Top