ತ್ಯಾಗ ಬಲಿದಾನದ ಸಂಕೇತ ಬಕ್ರೀದ್ ಹಬ್ಬ

ಬಳ್ಳಾರಿ: ತ್ಯಾಗ ಬಲಿದಾನಗಳ ಸಂಕೇತವಾದ ಬ್ರಕ್ರೀದ್ ಹಬ್ಬವನ್ನ ಗಣಿನಾಡು ಬಳ್ಳಾರಿಯಲ್ಲಿ ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದ್ರು. ಬಳ್ಳಾರಿಯ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಭಾಂದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ರು. ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.  

ಸಾಮೂಹಿಕ ಪ್ರಾರ್ಥನೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಬಿಳಿ ಟೋಪಿಯನ್ನು ಧರಿಸಿ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು .

ಬಳಿಕ ಸಚಿವ ಬಿ.ನಾಗೇಂದ್ರ ಅವರು ಹಾಗೂ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮುಸ್ಲಿಂ ಭಾಂದವರಿಗೆ ಶುಭಾಶಯ ಕೋರಿದರು. ಇನ್ನು ಸಾಮೂಹಿಕ ಪ್ರಾರ್ಥನೆಯಲ್ಲಿ ಮಕ್ಕಳು ಕೂಡ ಭಾಗಿಯಾಗಿ ನಮಾಜ್ ಮಾಡಿದ್ದು, ಬಕ್ರಿದ್ ಹಬ್ಬದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತೋ ಒದಗಿಸಲಾಗಿತ್ತು. 

Facebook
Twitter
LinkedIn
WhatsApp
Email
Telegram

Leave a Comment

Your email address will not be published. Required fields are marked *

Translate »
Scroll to Top