ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು. ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವ ಜಯಂತಿ ನಿಮಿತ್ತ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.

Leave a Comment

Your email address will not be published. Required fields are marked *

Translate »
Scroll to Top