ಕುಷ್ಟಗಿ : ಕ್ಷೇತ್ರದ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ತುಮರಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದರು.
ಜಿಲ್ಲಾಮಟ್ಟದ ಕೋರೋನಾ ಲಸಿಕೆ ಕಾರ್ಯಕ್ರಮ ಆಯೋಜಿಸಿದ್ದು ಈ ಹಿನ್ನೆಲೆಯಲ್ಲಿ ಶಾಸಕರು ತಾಲೂಕಿನ ಪಟ್ಟಲಚಿಂತಿ ಗ್ರಾಮಕ್ಕೆ ಭೇಟಿ ನೀಡಿದರು.
ನಂತರ ಮಾತನಾಡಿದ ಅವರು, ಜನರಿಗೆ ಕೋರೋನಾ ಬರದ ಹಾಗೆ ತಡೆಗಟ್ಟಲು ಪ್ರತಿಯೊಬ್ಬರು ಲಸಿಕೆ ಹಾಕಿಸಿ ಕೊಳ್ಳುವಂತೆ ಜನತೆಗೆ ಮನವಿ ಮಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಶೇ. 100 ರಷ್ಟು ವ್ಯಾಕ್ಸಿನೇಷನ್ ಮಾಡುವ ಉದ್ದೇಶದಿಂದ ತಾಲೂಕಿನ ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಶಾಸಕರು ತುಮರಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದರು.
ಇದೇ ವೇಳೆ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.