ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧೆಡೆ ರಸ್ತೆ ಅಗಲೀಕರಣ ಮತ್ತು ದುರಸ್ತಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹಾಗೂ ರಸ್ತೆಗೆ ಅಡ್ಡವಾಗಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವುದರಿಂದ ವಿವಿಧೆಡೆ ಮೂರು ವಾರಗಳ ಕಾಲ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ 2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪ್ರದೇಶಗಳಲ್ಲಿ ಕೆಲಸ ನಿರ್ವಹಣೆ ದಿನದಂದು ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ
ವಿದ್ಯುತ್ ಕಡಿತ ಉಂಟಾಗಲಿರುವ ಪ್ರದೇಶಗಳು: ನಗರದ ವಡ್ಡರಬಂಡೆ, ತಾಳೂರ್ ರೋಡ್, ರಾಯಲ್ ರಸ್ತೆ, ಅನಂತಪುರ ರಸ್ತೆ, ಮೀನಾಕ್ಷಿ ಸರ್ಕಲ್, ಮೋತಿ ಸರ್ಕಲ್, ದುರ್ಗಮ್ಮ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.