ಮುಖ್ಯಮಂತ್ರಿಗಳಿಂದ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ  ನಿಧಿಯಡಿ  ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

ಅವರು ಇಂದು ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. 

ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಅದು ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ. 668 ಕೋಟಿ ವೆಚ್ಚದಲ್ಲಿ ಕಮಂಡ್ ಸೆಂಟರ್  ನಿರ್ಮಾಣವಾಗಿದೆ. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ. ಬೆಂಗಳೂರು ನಗರದಲ್ಲಿ ಸಂಚಾರ  ದಟ್ಟಣೆ, ಮಹಿಳೆಯರ ಮೇಲೆ ದೌರ್ಜನ್ಯ, ಒಂಟಿ ಮನೆಗಳಿರುವಲ್ಲಿ, ವೃದ್ಧರು ಒಂಟಿಯಾಗಿರುವಲ್ಲಿ ಹೆಚ್ಚಿನ ಗಮನ ನೀಡಬೇಕು ಎಂದರು.

ಅಪರಾಧಗಳು ನಡೆಯದ ರೀತಿ ತಡೆಯಬೇಕು

 

ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು. ಬೆಂಗಳೂನಲ್ಲಿ ಕೊಲೆಯಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿಗಳ ಕೊಲೆ ಪ್ರಕರಣವನ್ನು ಉದಾಹರಿಸಿದ ಮುಖ್ಯಮಂತ್ರಿಗಳು ಇಂಥವು ನಡೆಯದಂತೆ ನೋಡಿಕೊಳ್ಳಬೇಕು ಎಂದರು. ಅದಕ್ಕೆ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೋಲಿಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕೆಂದರು. 

ಬೆಂಗಳೂರು ಸುರಕ್ಷಿತ ನಗರವಾಗಬೇಕು

 

ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ತಾಪನೆಯಾಗಿದ್ದು ಇದರ ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ ಎಂದರು. ಅತ್ಯಾಧುನಿಕ ಉಪಕರಣಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದ್ದು ಇವೆಲ್ಲವೂ ಉಪಯೋಗವಾಗಬೇಕು . ಹಾಗಾದಾರೆ ಕಮಾಂಡ್ ಸೆಂಟರ್ ನಿಂದ ಬೆಂಗಳೂರು ನಿಜವಾಗಿಯೂ ಸುರಕ್ಷಿತ ನಗರವೆನಿಸುತ್ತದೆ. ಪೋಲಿಸಿನವರಿಗೂ ಉತ್ತಮ ಹೆಸರು ಬರಲಿದೆ ಎಂದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top