ರಾಜ್ಯದಲ್ಲಿ ಭರಣಿ ಮಳೆ: ರೈತರ ಮೂಗದಲ್ಲಿ ಮಂದಹಾಸ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭರಣಿ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ.

ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ.ಭರಣಿ ಮಳೆಯಾದರೆ ಧರಣಿಯೆಲ್ಲಾ ಸಂತುಷ್ಠಿ ಎಂಬ ನಾಣ್ನುಡಿಯಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೇ17ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಇನ್ನೂ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದ್ದರೆ, ಕೆಲವೆಡೆ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಉತ್ತಮ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಇನೂ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

 

ಮೇ 12ರಿಂದ ಮೇ 17ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ, ಈ ಅವಧಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಚದುರಿದಂತೆ ಅಲ್ಲಲ್ಲಿ ಬೀಳುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top