ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಭವಾನಿ ರೇವಣ್ಣ ಹಾಜರ್

ಬೆಂಗಳೂರು: ಲೈಂಗಿಕ ಅನ್ಯಾಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ದಳ  ಅಧಿಕಾರಿಗಳ ವಿಚಾರಣೆಗೆ ಹಾಜರಾಗದೆ ಕಳೆದ ೧೫-೨೦ ದಿನಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ  ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಹೈಕೋರ್ಟ್ನ ಏಕ ಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ವಿಚಾರಣೆಗೆ ಎಸ್ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ.

ಏನಿದು ಪ್ರಕರಣ?

ಪ್ರಜ್ವಲ್ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ ೨ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ದಾಖಲಾಗಿದೆ. ಹೆಚ್ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.

ಹೆಚ್ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಜಾಮೀನು ರ‍್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ರ‍್ಜಿ ತಿರಸ್ಕತಿಸಿತ್ತು.

 

ರ‍್ಜಿ ತಿರಸ್ಕೃತಗೊಳ್ಳುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ತಯಾರಿ ನಡೆಸಿದರು. ಇದೇ ವೇಳೆ ಭವಾನಿ ರೇವಣ್ಣ ಕೂಡ ಎಸ್ಐಟಿಗೆ “ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ಪತ್ರದಂತೆ ಎಸ್ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ್ದರು. ಆದರೆ, ಮನೆಯೊಳಗೆ ಹೋದ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಭವಾನಿ ರೇವಣ್ಣ ಮನೆಯಲ್ಲಿ ಇರಲಿಲ್ಲ. ಇದರಿಂದ ಎಸ್ಐಟಿ ಅಧಿಕಾರಿಗಳು ಸಂಜೆಯ ವರೆಗು ಕಾದು ನಿರಾಸೆಯಿಂದ ತೆರಳಿದ್ದರು. ಇದೀಗ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್ಐಟಿ ಎದುರು ಹಾಜರಾಗಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top