ತೀವ್ರ ಸ್ವರೂಪ ಪಡಕೊಂಡ ‘ಬಿಫರ್ ಜಾಯ್’

ಜೂ.15ಕ್ಕೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ರಾಜ್ಯದಲ್ಲಿ ಮುಂಗಾರಿನ ಸಿಂಚನ ಆರಂಭ

ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ʻಬಿಪರ್‌ಜಾಯ್‌ʼ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಜೂನ್‌ 15ರಂದು ಗುಜರಾತ್‌ನ ಕಛ್‌ ಹಾಗೂ ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಪೂರ್ವ- ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್‌ ಪ್ರಬಲಗೊಂಡಿದ್ದು, ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ ಮಾರ್ಪಟ್ಟಿದೆ. ಕಳೆದ 6 ಗಂಟೆಗಳಲ್ಲಿ 9 ಕಿಲೋಮೀಟರ್‌ ವೇಗದಲ್ಲಿ ಚಲಿಸುತ್ತಿದೆ. ಅಲ್ಲದೆ ಈ ಚಂಡಮಾರುತ ಚಲಿಸೋ ಮಾರ್ಗ ಹಾಗೂ ಅದರ ತೀವ್ರತೆಯನ್ನ ಪ್ರೆಡಿಕ್ಟ್‌ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಈ ಚಂಡಮಾರುತ ನಿರ್ದಿಷ್ಟವಾಗಿ ಯಾವ ಪ್ರದೇಶಕ್ಕೆ ಅಪ್ಪಳಿಸಲಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಅಂತ ಹವಾಮಾನ ಇಲಾಖೆ ಅಧಿಕಾರಿಯೊಬ್ರು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಈಗಾಗಲೇ ಮುಂಗಾರು ಮಳೆ ಪ್ರವೇಶಿಸಿದ್ದು, ಇಂದಿನಿಂದ ಜೂನ್ 15ರವರೆಗೆ ಭಾರಿ ಮಳೆ ಸುರಿಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top