ಸಂವಿಧಾನ ದಿನಾಚರಣೆ ಅಂಗವಾಗಿ ನ.26 ರಂದು ಬೃಹತ್ ಜಾಥ

Kannada Nadu
ಸಂವಿಧಾನ ದಿನಾಚರಣೆ ಅಂಗವಾಗಿ ನ.26 ರಂದು ಬೃಹತ್ ಜಾಥ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ನ.26 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಜಾಥ, ಬಳಿಕ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಾಥಾದಲ್ಲಿ ಸಂವಿಧಾನ ಕುರಿತಂತೆ ರಾಷ್ಟ್ರಧ್ವಜ ಮತ್ತು ಸಂವಿಧಾನದ ಪ್ರಮುಖ ಕಲಂಗಳು, ಭಾಗಗಳು ಪ್ರತಿಬಿಂಬಿಸುವಂತೆ ಹಾಗೂ ಪ್ರಮುಖ ನುಡಿಮುತ್ತುಗಳನ್ನು ಪ್ಲಕಾರ್ಡ್ ನಲ್ಲಿ ಪ್ರದರ್ಶಿಸುವುದರ ಆಕರ್ಷಕ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಶಾಸಕರುಗಳ ಸಮಕ್ಷಮದಲ್ಲಿ ಚಾಲನೆ ನೀಡಲಿದ್ದು, ಜಾಥಾವು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಹೆಚ್.ಆರ್.ಗವಿಯಪ್ಪ ವೃತ್ತ, ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಮಾರ್ಗವಾಗಿ ಮಹರ್ಷಿ ವಾಲ್ಮೀಕಿ ಭವನಕ್ಕೆ ತಲುಪಿ ವೇದಿಕೆ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ವಸತಿ ನಿಲಯಗಳ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ ಅವರು ತಿಳಿಸಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";