ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್‌ಗೆ ಬಿಗ್ ರಿಲೀಫ್ | ಮಧ್ಯಂತರ ತಡೆ ನೀಡಿದ ಹೈಕೋರ್ಟ್

Kannada Nadu
ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್‌ಗೆ ಬಿಗ್ ರಿಲೀಫ್ | ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಇಡಿ ಸಮನ್ಸ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮುಂದಿನ ವಿಚಾರಣೆವರೆಗೆ ಅಂದರೆ ಫೆಬ್ರವರಿ 10ರ ವರೆಗೆ ಇಡಿ ಸಮನ್ಸ್ಗೆ ತಡೆ ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ. ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿತ್ತು. ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪಾರ್ವತಿ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಇವರ ಜೊತೆಗೆ ಸಚಿವ ಭೈರತಿ ಸುರೇಶ್ ಅವರಿಗೂ ನೀಡಲಾಗಿದ್ದ ಇಡಿ ಸಮನ್ಸ್ಗೂ ಸಹ ಕೋರ್ಟ್ ತಡೆಯಾಜ್ಞೆ ನೀಡಿದೆ.

ಇನ್ನು ಈ ಮುಡಾ ಹಗರಣದ ಕೇಸ್‌ನಲ್ಲಿ ಸಚಿವ ಭೈರತಿ ಸುರೇಶ್ ಆರೋಪಿಯಾಗಿಲ್ಲವೆಂದು ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಭೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್ಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಫೆಬ್ರವರಿ 10ರವರೆಗೆ ಇಡಿ ಸಮನ್ಸ್ಗೆ ತಡೆ ನೀಡಿ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.

ವಾದ-ಪ್ರತಿವಾದ ಹೇಗಿತ್ತು..
ಸಚಿವ ಭೈರತಿ ಸುರೇಶ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದು, ಭೈರತಿ ಸುರೇಶ್ ಯಾವುದೇ ಅನುಸೂಚಿತ ಕೇಸ್‌ನ ಆರೋಪಿಯಲ್ಲ. ಆರೋಪಿಯಲ್ಲದಿದ್ದರೂ ಇಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೇ ಮಾದರಿಯ ಮತ್ತೊಂದು ಕೇಸ್‌ನಲ್ಲಿ ಸಮನ್ಸ್ ರದ್ದುಪಡಿಸಲಾಗಿದೆ. ಡಾ.ನಟೇಶ್‌ಗೆ ಇಡಿ ನೀಡಿದ್ದ ಸಮನ್ಸ್ನ್ನು ಹೈಕೋರ್ಟ್ ರದ್ದುಪಡಿಸಿದೆ. ಹೀಗಾಗಿ ಮುಂದಿನ ವಿಚಾರಣೆವರೆಗೂ ಇಡಿಯಿಂದ ರಕ್ಷಣೆ ಒದಗಿಸುವಂತೆ ಮನವಿ ಮಾಡಿದರು.

ಇನ್ನು ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, 14 ಸೈಟ್ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪವಿದೆ. ಅಪರಾಧದಿಂದ ಗಳಿಸಿದ ಹಣವಿಲ್ಲದಿದ್ದರೂ ತನಿಖೆ ನಡೆಸುತ್ತಿದೆ. ಹೀಗಾಗಿ ತನಿಖೆಗೆ ತಡೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದರು.

ನ್ಯಾ.ಎಂ.ನಾಗಪ್ರಸನ್ನ: ಸಿಎಂ ಪ್ರಕರಣದ ವಿಚಾರಣೆ ನಡೆಯುವಾಗ ಇದರಲ್ಲೇಕೆ ಮುಂದುವರಿಯುತ್ತೀರಾ ಎಂದು ಇಡಿ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಪ್ರಶ್ನಿಸಿದರು.

ಇಡಿ ಪರ ವಕೀಲ ಎಎಸ್‌ಜಿ ಅರವಿಂದ್ ಕಾಮತ್ ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ 2ನೇ ಆರೋಪಿ.. ಅವರ ಮೇಲೆ ಅಕ್ರಮವಾಗಿ ಸೈಟ್ ಗಳನ್ನು ಪಡೆದ ಆರೋಪವಿದೆ. ಪಿಎಂಎಲ್‌ಎ ಕಾಯ್ದೆಯಡಿ ಅನುಸೂಚಿತ ಕೇಸ್ ಇದೆ ಎಂದು ಉತ್ತರಿಸಿದರು.

ನ್ಯಾ.ಎಂ.ನಾಗಪ್ರಸನ್ನ: ಅಪರಾಧದಿಂದ ಗಳಿಸಿದ ಸಂಪತ್ತು ಈಗಿಲ್ಲವಲ್ಲ. ಇಡಿ ತನಿಖೆಯಿಂದ ಹೈಕೋರ್ಟ್ ಕಾಯ್ದಿರಿಸಿರುವ ಕೇಸ್‌ಗೆ ಹಾನಿಯಾಗಬಾರದು. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತಿಲ್ಲವೆAದು ಆದೇಶ ನೀಡಿದ್ದೇನೆ. ಈಗ ಇಡಿ ತನಿಖೆಗೆ ಅವಕಾಶ ನೀಡುವುದು ಹೇಗೆ ಈಗಲೇ ತನಿಖೆ ನಡೆಸಬೇಕಾದ ತುರ್ತು ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ಇಡಿ ಪರ ಎಎಸ್‌ಜಿ ಅರವಿಂದ್ ಕಾಮತ್: ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಹಾಜರುಪಡಿಸಿ ಎಂದಷ್ಟೇ ಹೇಳಿದ್ದೇವೆ. ಇದರಿಂದ ಹೈಕೋರ್ಟ್ ಮುಂದಿರುವ ಕೇಸ್ ಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯಾ.ಎಂ.ನಾಗಪ್ರಸನ್ನ: ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅಂತಿಮ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಇಡಿ ನಡೆಸುತ್ತಿರುವ ತನಿಖೆ ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಆಧರಿಸಿದೆ. ಹೀಗಾಗಿ ಇಡಿ ಸಮನ್ಸ್ ನಿಂದ ಹೈಕೋರ್ಟ್ ಕಾಯ್ದಿರಿಸುವ ಕೇಸ್ ಮೇಲೆ ಪರಿಣಾಮವಾಗಬಹುದು. ಡಾ. ನಟೇಶ್ ಪ್ರಕರಣದಲ್ಲಿ ಹೈಕೋರ್ಟ್ ಇಡಿ ಸಮನ್ಸ್ ರದ್ದುಪಡಿಸಿದೆ. ಇಡಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ ಅಷ್ಟೇ ಎಂದು ಇಡಿ ಪರ ವಕೀಲರು ಹೇಳಿದ್ದಾರೆ. ಆದರೆ ಇಡಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನ್ಯಾ.ಎಂ.ನಾಗಪ್ರಸನ್ನ: ಹಾಜರಾಗದಿದ್ದರೆ ನೀವು ನಾಳೆ ಅವರನ್ನು ಬಂಧಿಸಬಹುದು. ಹೀಗಾಗಿ ಈ ಬಗ್ಗೆ ಸೂಕ್ತ ಆದೇಶ ಹೊರಡಿಸಬೇಕಿದೆ ಎಂದು ಹೇಳಿ ಇಡಿ ಸಮನ್ಸ್ಗೆ ತಡೆ ನೀಡಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";