ಮರಿಯಮ್ಮನಹಳ್ಳಿ,ಫೆ,22 : ಬೈಕ್‌ಸ್ಕಿಡ್ ಆಗಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಪಟ್ಟಣ ಸಮೀಪದ ಕೆಂಚಟನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮರಿಯಮ್ಮನಹಳ್ಳಿ ಸಮೀಪದ ವೆಂಕಟಾಪುರ ಗ್ರಾಮದ ನಿವಾಸಿ ಧರ್ಮಪ್ಪ (48) ಎಂದು ಗುರುತಿಸಲಾಗಿದೆ. ಈತನು ಭಾನುವಾರ ಮರಬ್ಬಿಹಾಳ್ ಗೆ ಹೋಗಿ ಕಬ್ಬಿನ ಚೀಟಿಯನ್ನು ತೆಗೆದುಕೊಂಡು ತನ್ನ ಗ್ರಾಮಕ್ಕೆ ಬರುವಾಗ ಕೆಂಚಟನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯವಾಗಿದೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಮೃತಪಟ್ಟನು. ಘಟನ ಸ್ಥಳಕ್ಕೆ ಪಟ್ಟಣದ ಪಿ.ಎಸ್.ಐ.ಹನುಮಂತಪ್ಪ ತಳವಾರ್ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
