ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಬಿಜೆಪಿಯವರು ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು  ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಬಹಳ ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ, ಯಾವ ಪ್ರಗತಿಯನ್ನೂ ಸಾಧಿಸಿಲ್ಲ. ಈಗ ಪ್ರಗತಿ ಸಾಧಿಸುವುದಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಜನರು ನಂಬುವುದಿಲ್ಲ ಎಂದರು.

ಕುಮಾರಸ್ವಾಮಿಯವರು ಆರೋಪಿಸಲು ನೈತಿಕತೆ ಇಲ್ಲ :

 

ವಿದ್ಯುತ್ ಕಳ್ಳತನ ಎಸಗಿ ದಂಡ ಕಟ್ಟಿರುವ ಕುಮಾರಸ್ವಾಮಿಯವರಿಗೆ ನಮ್ಮನ್ನು ಅಪೇಕ್ಷಿಸಲು ಯಾವ ನೈತಿಕತೆಯೂ ಇಲ್ಲ. ಮಾಜಿ ಶಾಸಕ ಯತೀಂದ್ರರವರು ದುಡ್ಡಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆಯೇ , ಅವರ ಬಳಿ ಏನಾದರೂ ಪುರಾವೆ ಇದೆಯೇ  ಎಂದು ಪ್ರಶ್ನಿಸಿದರು. ಯತೀಂದ್ರರವರು ಸಿಎಸ್ ಆರ್ ಫಂಡ್ ಬಗ್ಗೆ ಮಾತನಾಡಿದ್ದರೆ, ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸುತ್ತಾರೆ. ಕುಮಾರಸ್ವಾಮಿಯವರ ಕಾಲದಲ್ಲಿ ವರ್ಗಾವಣೆಗಳ ಮೂಲಕ ದುಡ್ಡು ಮಾಡಿರುವುದು ಜಗಜ್ಜಾಹೀರವಾಗಿದೆ. ಅವರು ನಮ್ಮ ವಿರುದ್ದ ಆರೋಪಗಳನ್ನು ಮಾಡುವ ನೈತಿಕತೆ ಇಲ್ಲ ಎಂದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top