ನಾಳೆ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ನಾಳೆ (ಜನವರಿ 29) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸೂಚಿಸಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಹನುಮಧ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದನ್ನು ಖಂಡಿಸಲಾಗುವುದು. ರಾಷ್ಟ್ರಧ್ವಜವನ್ನು ಮಧ್ಯಾಹ್ನ 3 ಗಂಟೆಗೆ ಹಾರಿಸುವ ಮೂಲಕ ಅವಮಾನ ಮಾಡಿದ್ದಾರೆ. ರಾಷ್ಟ್ರಧ್ವಜವನ್ನು ಬೆಳಿಗ್ಗೆ 9 ಗಂಟೆಗೆ ಹಾರಿಸಿ ಸಂಜೆ ವೇಳೆಗೆ ಅದನ್ನು ಕೆಳಕ್ಕಿಳಿಸಬೇಕೆಂಬ ನಿಯಮವನ್ನು ಉಲ್ಲಂಘಿಸಿ ಅವಮಾನ ಮಾಡಿದ್ದನ್ನು ಖಂಡಿಸಲಾಗುತ್ತದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top