ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ

ಬೆಂಗಳೂರು : ಬಿ.ಬಿ.ಎಂ.ಪಿ. ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ದವಾಗಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸೇರಿದಂತೆ ಯಾವುದೇ ಚುನಾವಣೆ ಎದುರಿಸಲು ಪಕ್ಷವು ಸನ್ನದ್ದಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಪಕ್ಷವು ಬೆಂಗಳೂರಿನಲ್ಲಿ ಗರಿಷ್ಠ ಸಂಸದರನ್ನು ಮತ್ತು ಶಾಸಕರನ್ನು ಹೊಂದಿದೆ. ಅಲ್ಲದೆ, ಸಂಘಟನೆಯಾಗಿ ಪಕ್ಷವು ಅತ್ಯಂತ ಬಲಿಷ್ಠವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುವುದಾಗಿ ಅವರು ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್. ಬೊಮ್ಮಾಯಿ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಜನೋಪಯೋಗಿ ಕಾರ್ಯಗಳನ್ನು ಜನರ ಗಮನಕ್ಕೆ ತರುವ ಮೂಲಕ ಪಕ್ಷವು ಗರಿಷ್ಠ ಸ್ಥಾನಗಳನ್ನು ಗೆದ್ದು ಬಿ.ಬಿ.ಎಂ.ಪಿ.ಯಲ್ಲಿ ಅಧಿಕಾರಕ್ಕೇರಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top