ಸಿಬಿಐ ನಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕರ‍್ನರ್ ನೊಟೀಸ್: ಎಸ್ ಐಟಿ

ಬೆಂಗಳೂರು: ಲೈಂಗಿಕ ಕಿರುಕುಳ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಬಿಐ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕರ‍್ನರ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹಗರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದ ಸಂಬಂಧ ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು, ಈ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೂಕ್ತ ಕ್ರಮಗಳೊಂದಿಗೆ ಮುನ್ನಡೆಯಲಿದ್ದೇವೆ. ಸಿಬಿಐ ಬ್ಲೂ ಕರ‍್ನರ್ ನೊಟೀಸ್ ಜಾರಿ ಮಾಡಲಿದ್ದು, ಇದು ತನಿಖೆಯನ್ನು ಚುರುಕುಗೊಳಿಸಲಿದೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣಗಳಿಂದ ಮಾಹಿತಿ ಪಡೆದ ಕೂಡಲೇ ಆರೋಪಿಗಳನ್ನು ಬಂಧಿಸಿ ವಾಪಸ್ ಕರೆತರುವುದಾಗಿ ಅಧಿಕಾರಿಗಳು (ಎಸ್‌ಐಟಿ ಅಧಿಕಾರಿಗಳು) ಭರವಸೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆ ಹೇಳಿದೆ.

ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರ ಸಂಸ್ಥೆಯಿಂದ ಬ್ಲೂ ಕರ‍್ನರ್ ನೋಟಿಸ್ ನೀಡಲಾಗುತ್ತದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕರ‍್ನರ್ ನೋಟಿಸ್ ಕೋರಿ ಭಾರತದಲ್ಲಿನ ಇಂಟರ್‌ಪೋಲ್ ವಿಷಯಗಳ ನೋಡಲ್ ಸಂಸ್ಥೆಯಾದ ಸಿಬಿಐಗೆ ಎಸ್‌ಐಟಿ ವಿನಂತಿಯನ್ನು ಕಳುಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಒಂದೊಮ್ಮೆ ಸಿಬಿಐ ಈ ನೋಟಿಸ್ ನೀಡಿದರೆ, ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಸಿಗಲಿದೆ ಎಂದು ಎಸ್‌ಐಟಿ ಭಾವಿಸಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ೩೩ ರ‍್ಷದ ಪ್ರಜ್ವಲ್ ರೇವಣ್ಣ, ಹಾಸನದಿಂದ ಬಿಜೆಪಿ-ಜೆಡಿ (ಎಸ್) ಮೈತ್ರಿಕೂಟದ ಅಭ್ರ‍್ಥಿಯಾಗಿದ್ದರು, ಏಪ್ರಿಲ್ ೨೬ ರಂದು ಚುನಾವಣೆ ನಡೆದಿತ್ತು.

 

ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ವೀಡಿಯೋ ತುಣುಕುಗಳು ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಹರಿದಾಡಲು ಪ್ರಾರಂಭಿಸಿದವು, ನಂತರ ರಾಜ್ಯ ರ‍್ಕಾರವು ಹಗರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತ್ತು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top