ಸೋಮಾಲಿಯಾದಲ್ಲಿ ಬಾಂಬ್ ಸ್ಫೋಟ : 25 ಮಕ್ಕಳು ಮೃತ್ಯು

ಮೊಗಡಿಶು:  ಜಗತ್ತಿನ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾದ ಸೋಮಾಲಿಯಾದಲ್ಲಿ ಸ್ಫೋಟ ಸಂಭವಿಸಿದ್ದು, 25 ಮಕ್ಕಳು ಮೃತಪಟ್ಟಿದ್ದಾರೆ.

 

ಪೂರ್ವ ಲೋವರ್ ಶಾಬೆಲ್ಲೆಯ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ. ಹಳೆಯ ಬಾಂಬ್‌ನ ಅವಶೇಷಗಳು ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಸ್ಫೋಟದಲ್ಲಿ 53 ಮಕ್ಕಳು ಗಾಯಗೊಂಡಿದ್ದಾರೆ.

ಕ್ರೊಯೊಲಿ ಪಟ್ಟಣದ ಉಪ ಜಿಲ್ಲಾಧಿಕಾರಿ ಅಬ್ದಿ ಅಹ್ಮದ್ ಅಲಿ, “ಹಳ್ಳಿಯ ತೆರೆದ ಮೈದಾನದಲ್ಲಿ ಮಕ್ಕಳು ಆಡುತ್ತಿದ್ದಾಗ ಬಾಂಬ್‌ಗಳು ಮತ್ತು ನೆಲಬಾಂಬ್‌ಗಳಂತಹ ಯುದ್ಧದ ಸ್ಫೋಟಕ ಅವಶೇಷಗಳು ಸ್ಫೋಟಿಸಿವೆ ಎಂದು ತಿಳಿಸಿದ್ದಾರೆ.

 

ಮೃತರ ಪೈಕಿ 22 ಮಕ್ಕಳ ಶವಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top