ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ

‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ

Kannada Nadu
ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ

ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು. ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು.

ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ. ‘ಯಾವ ಕಥೆಯೂ ಸಣ್ಣದಲ್ಲ, ಅನುಭವದ ವಸ್ತ್ರದಲ್ಲಿನ ಪ್ರತಿ ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿAದಲೇ ಈ ಪುಸ್ತಕ ರೂಪುಗೊಂಡಿತು’ ಎಂದು ಹೇಳಿದ್ದಾರೆ. ‘ನನ್ನ ಸುಂದರವಾದ ಭಾಷೆಗೆ ದೊರೆತ ಎಂತಹ ಸೊಗಸಾದ ಗೆಲುವು ಇದು’ ಎಂದು ಅನುವಾದಕಿ ಭಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ. ಫ್ರೆಂಚ್‌ನಿAದ ಅನುವಾದವಾದ ಎರಡು ಕೃತಿಗಳು, ಜಪಾನ್, ಇಟಾಲಿಯನ್ ಹಾಗೂ ಡ್ಯಾನಿಷ್ ಭಾಷೆಯ ತಲಾ ಒಂದು ಕೃತಿ ‘ಶಾರ್ಟ್ ಲಿಸ್ಟ್’ನಲ್ಲಿದ್ದವು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";