ಕೊಪ್ಪಳ: ಜೀವನದ ಗುರಿ, ಉದ್ದೇಶಗಳನ್ನು ಈಡೇರಿಸಲು ಪುಸ್ತಕಗಳು ನಮಗೆ ಸಹಕಾರಿಯಾಗುತ್ತವೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಹೇಳಿದರು. ಎಸ್.ಟಿ.ಇ(ಎ)ಎಂ (ಸೈನ್ಸ್ ಟೆಕ್ನಾಲಜಿ, ಇಂಜಿನಿಯರಿಂಗ್, ಆರ್ಟ್, ಮ್ಯಾಥ್ ಎಜ್ಯುಕೇಶನ್) ಆಧಾರಿತ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಕೊಪ್ಪಳ ಹಾಗೂ ಯುವಚಿಂತನ ಫೌಂಡೇಶನ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಆಯ್ದ ೨೦ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಹಾಗೂ ಪ್ರತಿ ಗ್ರಂಥಾಲಯದ ಹತ್ತಿರವಿರುವ ಶಾಲೆಯ ೨೦ ಶಾಲಾ ಶಿಕ್ಷಕರಿಗೆ ಇಂದಿನಿಂದ (ಏ. ೨೮) ರಿಂದ ೩೦ ರವರೆಗೆ ನಡೆಯುವ ವಸತಿಯುತ ತರಬೇತಿ ಕಾರ್ಯಕ್ರಮವನ್ನು ಕೊಪ್ಪಳ ತಾಲೂಕಿನ ಟಣಕನಕಲ್‌ನಲ್ಲಿರುವ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಗ್ರಂಥಾಲಯಗಳ ಪಾತ್ರ ಮಹತ್ವದ್ದಾಗಿದೆ. ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನ ಮಾತ್ರವಲ್ಲದೇ ನಮ್ಮ ಜೀವನದ ಗುರಿ ಉದ್ದೇಶಗಳನ್ನು ಈಡೇರಿಸಲು ಪುಸ್ತಕಗಳು ನಮಗೆ ಸಹಕಾರಿಯಾಗುತ್ತವೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲಾಡಳಿತದ ಮನ್ವಂತರ ಕಾರ್ಯಕ್ರಮದ ಮುಖಾಂತರ ಸಾವಿರಾರು ವಿದ್ಯಾರ್ಥಿಗಳು ಓದುವ ಮತ್ತು ಪುಸ್ತಕವನ್ನು ವಿಮರ್ಶಿಸುವ ನಿಟ್ಟಿನಲ್ಲಿ ಪಯತ್ನವನ್ನು ಮಾಡಿದ್ದಾರೆ. ಅವರಲ್ಲಿ ಉತ್ತಮ ವಿಮರ್ಶೆಯನ್ನು ಬರೆದವರಿಗೆ ನಗದು ಬಹುಮಾನವನ್ನು ನೀಡಲಾಗಿತ್ತು. ಈ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಪುನಃ ಪ್ರಾರಂಭಿಸಲಾಗುವುದು. ಈ ತರಬೇತಿಯ ಮುಖಾಂತರ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಸಾರ್ಮಥ್ಯಾಭಿವೃದ್ಧಿಯಾಗಿ ಗ್ರಂಥಾಲಯವು ವಿದ್ಯಾರ್ಥಿಗಳನ್ನು ತನ್ನತ್ತ ಸೆಳೆಯುವಂತಾಗಲಿ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ ಫೌಜಿಯಾ ತರನುಮ್ ಅವರು ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಗ್ರಂಥಾಲಯಗಳ ಸುಧಾರಣೆಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಈ ತರಬೇತಿಯು ಅದರ ಭಾಗವಾಗಿದೆ. ತರಬೇತಿಯ ಮುಖಾಂತರ ಗ್ರಂಥಾಲಯ ಮೇಲ್ವಿಚಾರಕರಿಗೆ ನಿರಂತರ ಮಾರ್ಗದರ್ಶನ ಮತ್ತು ಸಹಕಾರವನ್ನು ನೀಡಲಾಗುತ್ತದೆ. ಈ ಗ್ರಂಥಾಲಯಗಳು ಇತರ ಗ್ರಂಥಾಲಯಗಳಿಗೆ ಮಾದರಿಯಾಗಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೇರೆ ಬೇರೆ ಸಂಘ ಸಂಸ್ಥೆಗಳನ್ನು ಗ್ರಂಥಾಲಯಗಳ ಉನ್ನತೀಕರಣಕ್ಕೆ ತೊಡಗಿಸಿಕೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ಉದ್ದೇಶ;
ಕೋವಿಡ್ ಸಾಂಕ್ರ್ರಾಮಿಕ ರೋಗದಿಂದ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ತೊಂದರೆಯುಂಟಾಗಿದ್ದು, ಅವರ ಶಿಕ್ಷಣ ಮಟ್ಟವನ್ನು ಉನ್ನತೀಕರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಗ್ರಂಥಾಲಯಗಳನ್ನು ಉನ್ನತೀಕರಿಸುವುದು ಪ್ರಮುಖ ಕಾರ್ಯಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಓದುವ ಬೆಳಕು ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದರ ಅಂಗವಾಗಿ ಬೆಂಗಳೂರಿನ ಯುವಚಿಂತನ ಫೌಂಡೇಶನ್ ಸಂಸ್ಥೆಯ ಸಹಾಯದಿಂದ ಎಸ್.ಟಿ.ಇ(ಎ)ಎಂ – ಸೈನ್ಸ್ ಟೆಕ್ನಾಲಜಿ, ಇಂಜಿನಿಯರಿಂಗ್, ಆರ್ಟ್, ಮ್ಯಾಥ್ ಎಜ್ಯುಕೇಶನ್ (Sಖಿಇ(ಂ)ಒ -Sಛಿieಟಿಛಿe ಖಿeಛಿhಟಿoಟogಥಿ, ಇಟಿgiಟಿeeಡಿiಟಿg, ಂಡಿಣ, ಒಚಿಣh ಇಜuಛಿಚಿಣioಟಿ) ಆಧಾರಿತ ಶಿಕ್ಷಣ ನೀಡಲು ಆಯುಕ್ತರು, ಕರ್ನಾಟಕ ಪಂಚಾಯತ್‌ರಾಜ್ ಆಯುಕ್ತಾಲಯ, ಬೆಂಗಳೂರುರವರು ಸೂಚಿಸಿರುವಂತೆ ಜಿಲ್ಲೆಯ ಆಯ್ದ ೨೦ ಗ್ರಂಥಾಲಯಗಳನ್ನು ಗುರುತಿಸಲಾಗಿದೆ.
ಯುವಚಿಂತನ ಫೌಂಡೇಶನ್‌ನ ಮುಖ್ಯಸ್ಥರಾದ ಅನುಪಮ ಅವರು ಮತ್ತು ಅವರ ತಂಡದವರು ಈ ತರಬೇತಿಯನ್ನು ನಡೆಸಿಕೊಟ್ಟರು.
ಶಾರದಾ ಇಂಟರ್ ನ್ಯಾಶನಲ್ ಶಾಲೆಯ ಆಡಳಿತಾಧಿಕಾರಿ ರೀಚಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯುನಿಸೆಫ್ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಜಿಲ್ಲಾ ಪಂಚಾಯತ್ ಯೋಜನಾ ವಿಭಾಗದ ಅಧಿಕಾರಿ ಕಮಲಯ್ಯ, ಯುನಿಸೆಫ್ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರಾದ ಮಂಜುನಾಥ್ ಸೇರಿದಂತೆ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು