ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಪ್ರತಿಮೆಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ, ಬುಡಾ ಅಧ್ಯಕ್ಷ ಪಾಲನ್ನ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಜಿಪಂ ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.