ಸಿಎಂ ಸಿದ್ದರಾಮಯ್ಯ ಅವರ ರಾಜಿನಾಮೆ ಕೇಳುವ ನೈತಿಕತೆ ಬಿಎಸ್ ವೈ ಅವರಿಗೆ ಇಲ್ಲ: ಯತ್ನಾಳ್

ಬೆಂಗಳೂರು: ಗಂಭೀರ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಹೊಂದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಮುಖ್ಯಮಂತ್ರಿ ರಾಜಿನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವವರ ಮೇಲೆ ವಾಗ್ದಾಳಿ ನಡೆಸಿದ್ದು, ಇದರಿಂದ ಬಿಜೆಪಿ ಮತ್ತೊಮ್ಮೆ ಮುಜುಗರಕ್ಕೆ ಒಳಗಾಗುವಂತಾಗಿದೆ.

 

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಬ್ಬರೂ ಭ್ರಷ್ಟರು. ಇವರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ಮಾಡುತ್ತಿರುವುದು ಹಾಸ್ಯಾಸ್ಪದ. ಇಷ್ಟಕ್ಕೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲು ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿ.ಎಸ್.ವೈ ಮುಖ್ಯಮಂತ್ರಿಯಾಗಿದ್ದಾಗ ವಿಜಯೇಂದ್ರ ಭ್ರಷ್ಟಾಚಾರವೆಸಗಿದ್ದರು. ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದ್ದರು. ಭ್ರಷ್ಟರ ಕುಟುಂಬದ ಕೈಗೆ ಪಕ್ಷದ ಅಧಿಕಾರದ ಚುಕ್ಕಾಣಿ ಇರಬಾರದು. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಮತ್ತು ವಂಶಾಡಳಿತದ ವಿರುದ್ಧ ಇದ್ದಾರೆ. ಅವರ ಗಮನಕ್ಕೆ ಈ ಎಲ್ಲಾ ವಿಚಾರಗಳನ್ನು ಗಮನಕ್ಕೆ ತರುತ್ತೇನೆ. ಯಡಿಯೂರಪ್ಪ ಅವರು ಯಾವುದೇ ವೇದಿಕೆ ಮೇಲೆ ಕುಳಿತುಕೊಳ್ಳಬಾರದು ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ. ಆದರೆ ಬಹಿರಂಗವಾಗಿ ಇಬ್ಬರೂ ಮುಖಂಡರು ಪರಸ್ಪರ ಟೀಕೆ ಮಾಡಿಕೊಳ್ಳುತ್ತಾರೆ. ಬೈದಾಡಿಕೊಳ್ಳದಿದ್ದರೆ ಹೊಂದಾಣಿಕ ರಾಜಕಾರಣ ಎಂದು ಜನ ಟೀಕೆ ಮಾಡುತ್ತಾರೆ ಎನ್ನುವ ಕಾರಣದಿಂದ ಪರಸ್ಪರ ಟೀಕೆ ಮಾಡಿಕೊಳ್ಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಬಿ.ವೈ. ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ.

ನಾವು ವಿಧಾನಸಭೆಯಲ್ಲಿ ಧರಣಿ ಕುಳಿತಾದ ಡಿ.ಕೆ. ಶಿವಕುಮಾರ್ ಅವರಿಂದ ವಿಜಯೇಂದ್ರ ಕಡತಕ್ಕೆ ಸಹಿ ಮಾಡಿಸಿಕೊಂಡಿದ್ದಾರೆ. ಕಡತಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಶಿವಕುಮಾರ್ ಬರೆದುಕೊಟ್ಟಿದ್ದಾರೆ. ವಿಜಯೇಂದ್ರ, ಡಿ.ಕೆ. ಶಿವಕುಮಾರ್ ಇಬ್ಬರೂ ಭ್ರಷ್ಟರಿದ್ದಾರೆ. ಜೊತೆಗೆ ವ್ಯವಹಾರವನ್ನು ಸಹ ಇಟ್ಟುಕೊಂಡಿದ್ದಾರೆ ಎಂದರು.

 

ಸಿದ್ದರಾಮಯ್ಯ ಅವರಿಗೆ ಧಮ್ಮು, ತಾಖತ್ತು ಇದ್ದರೆ ಕೊರೋನಾದಲ್ಲಿ ಎಷ್ಟು ಅವ್ಯವಹಾರ ಆಗಿದೆ ಎನ್ನುವ ಕುರಿತು ತನಿಖೆ ನಡೆಸಬೇಕು. ಈ ಕುರಿತು ಎಚ್.ಕೆ. ಪಾಟೀಲ್, ರಾಮಲಿಂಗಾ ರೆಡ್ಡಿ ಅವರು ವರದಿ ನೀಡಿದ್ದು, ಇದರ ಆಧಾರದ ಮೇಲೆ ತನಿಖೆ ಮಾಡಿಸಲಿ.  ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ಕುರಿತು ತನಿಖೆ ನಡೆಸಲಿ. ಭೋವಿ, ತಾಂಡಾ ಅಭಿವೃದ್ಧಿ ನಿಗಮಗಳಲ್ಲಿ ಅವ್ಯವಹಾರ ನಡೆದಿದೆ. ಎಲ್ಲರದ್ದು ಈಗ ಹೊರಗೆ ತೆಗೆಯಬೇಕು ಎಂದು ಹೇಳಿದರು. 

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top