ರಾಯಚೂರಿನ ವಿಜ್ಞಾನ ಕೇಂದ್ರವನ್ನ ಕೆಟಗರಿ – 2 ವಿಜ್ಞಾನ ಕೇಂದ್ರವಾಗಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು, 22.25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆಟಗರಿ – 2 ವಿಜ್ಞಾನ ಕೇಂದ್ರವನ್ನಾಗಿ ಉನ್ನತೀಕರಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳೀಕೆಯನ್ನು ನೀಡಿರುವ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಯನ್ನು ಮೂಡಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳೂ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಅಧ್ಯಕ್ಷನಾಗಿದ್ದ ಸಂಧರ್ಭದಲ್ಲಿ ಅಗತ್ಯ ಅನುದಾನ ನೀಡುವ ಮೂಲಕ ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕೇಂದ್ರ ಸರಕಾರದ ನ್ಯಾಷನಲ್‌ ಕೌನ್ಸಿಲ್‌ ಆಫ್‌ ಸೈನ್ಸ್‌ ಮ್ಯೂಸಿಯಮ್‌ ನ ಸ್ಕೀಮ್‌ ಫಾರ್‌ ಪ್ರಮೋಷನ್‌ ಆಫ್‌ ಕಲ್ಚರ್‌ ಆಫ್‌ ಸೈನ್ಸ್‌ನ ಮಾರ್ಗಸೂಚಿಯ ಅನ್ವಯ ಕೇಂದ್ರ ತಂಡ ರಾಯಚೂರಿಗೆ ಭೇಟಿ ನೀಡಿತು. ಕೇಂದ್ರ ಸರಕಾರಕ್ಕೆ ಈ ತಂಡ ಸಲ್ಲಿಸಿದ ವರದಿಯ ಅನ್ವಯ ಕೆಟಗರಿ – 2 ರ ವಿಜ್ಞಾನ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸುವಂತಹ ಪ್ರಸ್ತಾವನೆಯನ್ನ ಸಚಿವ ಸಂಪುಟಕ್ಕೆ ಸಲ್ಲಿಸಲಾಗಿತ್ತು. 

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಿ ಒಕ್ಕೊರಲಿನಿಂದ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಈ ಕೇಂದ್ರ ಉನ್ನತೀಕರಣಗೊಳ್ಳುವ ಮೂಲಕ ಈ ಬಾಗದ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿಜ್ಞಾನದ ಜಾಗೃತಿಯನ್ನು ಹೆಚ್ಚಳಕ್ಕೆ ಅನುವು ಮಾಡಿಕೊಡಲಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top