ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ- ಬೊಮ್ಮಾಯಿ

ಬೆಂಗಳೂರು : ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹಿರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ ಅಧಿಸೂಚಿತ ಕೆರೆ ಪ್ರದೇಶದಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

ಬೆಂಗಳೂರು ನಗರ, ಯಲಹಂಕ ತಾಲ್ಲೂಕು,ಯಲಹಂಕ ಹೋಬಳಿ, ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿನ ಜಲಾವೃತ ಪ್ರದೇಶವನ್ನು ವಸತಿ ವಲಯಕ್ಕೆ ಬದಲಾವಣೆ ಮಾಡಲು ಕೋರಿದ್ದ ಮೇರೆಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *

Translate »
Scroll to Top