ಲಾರಿ ಕಾರು ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಕೊರಟಗೆರೆ : ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಮೃತಪಟ್ಟು 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜಟ್ಟಿಗ್ರಾಹಾರದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

 

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗಾ ಹೋಬಳಿಯ ಜಟ್ಟಿ ಅಗ್ರಹಾರ ಬಳಿಯ ತುಮಕೂರು – ಮಧುಗಿರಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಸುಮಾರು 2 ಗಂಟೆ ನಡುವೆ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ದಾವಣೆಗೆರೆ ಮೂಲದ ಶಿವು ನಾಯಕ್(32), ಕೊಡಿಗೇನಹಳ್ಳಿಯ ಪರಮೇಶ್ ಎಂದು ಗುರುತಿಸಲಾಗಿದೆ.

ಸ್ನೇಹಿತರ ಮದುವೆಗೆ ತೆರಳಿ ವಾಪಸ್ ಬರುತ್ತಿದ್ದ ಯುವಕರ ತಂದಲ್ಲಿದ್ದ 7 ಮಂದಿಯಲ್ಲಿ ಇಬ್ಬರು ಮೃತಪಟ್ಟಿದ್ದು 5 ಮಂದಿ ತೀವ್ರವಾಗಿ ಗಾಯಗೊಂಡಿ ದ್ದು ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

 

ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದ ದಾಬಸ್ ಪೇಟೆಯಲ್ಲಿ ಮದುವೆ ಮುಗಿಸಿ ಕೊಂಡು ತುಮಕೂರು ಮೂಲಕ ಕೊಡಿಗೇನಹಳ್ಳಿ ಕಡೆ ಹೋಗುತ್ತಿದ್ದರು, ಆಂದ್ರಪ್ರದೇಶದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ ಮುಖಾ-ಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ಮತ್ತು ಪಿಎಸೈ ಚೇತನ್ ಗೌಡ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top