ಅಂಕಣಗಳು

ಯುಪಿಎಸ್ ಸಿ ಪರೀಕ್ಷೆ : ರಾಜ್ಯದ ಶೇ 50 ರಷ್ಟು ಇಂಡಿಯಾ ಫಾರ್ ಐಎಎಸ್ ಅಕಾಡೆಮಿ ಅಭ್ಯರ್ಥಿಗಳು

ಬೆಂಗಳೂರು: ಕೇಂದ್ರ ಕೇಂದ್ರ ಲೋಕಸೇವಾ ಆಯೋಗದಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಹೆಚ್ಚಿನ ಸಾಧನೆ ಮಾಡಿದ್ದು, ಶೇ 50 ರಷ್ಟು ಅಭ್ಯರ್ಥಿಗಳು ಇಂಡಿಯಾ ಫಾರ್ ಐಎಎಸ್ ಅಕಾಡೆಮಿಗೆ ಸೇರಿದವರಾಗಿದ್ದಾರೆ.

ಇಸ್ರೇಲ್‌ – ಇರಾನ್‌ ಸಂಘರ್ಷ, ಕಳವಳಕ್ಕೆ ಕಾರಣ – ವಿದೇಶಾಂಗ ಸಚಿವ ಡಾ. ಎಸ್‌ ಜೈಶಂಕರ್‌

ಬೆಂಗಳೂರು: ಇಸ್ರೇಲ್ – ಇರಾನ್ ಸಂಘರ್ಷ ಜಾಗತಿಕವಾಗಿ ತೀವ್ರ ಕಳವಳಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಹೇಳಿದ್ದಾರೆ.
ರಾಜಾಜಿನಗರದ ದಿ ಇನ್ಟ್ಯಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ -ಐಸಿಎಸ್ಐ ಬೆಂಗಳೂರು ಚಾಪ್ಟರ್ ನಲ್ಲಿ ಆಯೋಜಿಸಿದ್ದ “ವಿಶ್ವಬಂಧು ಭಾರತ್” ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ವಿಶ್ವದ ಯಾವುದೇ ಸಂಘರ್ಷ, ಬಿಕ್ಕಟ್ಟು ಜಾಗತಿಕವಾಗಿ ಪರಿಣಾಮ ಬೀರುತ್ತದೆ. ಜಾಗತಿಕವಾಗಿ ತೈಲ ಬೆಲೆ, ಆಹಾರದರಗಳ ಏರಿಕೆ, ಹಣದುಬ್ಬರ ಹೆಚ್ಚಳ ಒಳಗೊಂಡಂತೆ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಜಗತ್ತಿನ ಎಲ್ಲಾ ಸಂಘರ್ಷ, ಸಮಸ್ಯೆಗಳಿಗೆ “ವಿಶ್ವಬಂಧು” ಪರಿಕಲ್ಪನೆಯೇ ಪರಿಹಾರವಾಗಿದೆ ಎಂದು ಪ್ರತಿಪಾದಿಸಿದರು.

ಕೊಬ್ಬರಿ ಶೆಡ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಗುಬ್ಬಿ : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಬ್ಬರಿ ಶೆಡ್ಡು, ಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ರಾಂಪುರದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ರೈತ ಮಹಿಳೆ ಶಿವಗಂಗಮ್ಮನವರು ಕುಟುಂಬ ಸಮೇತ ತೋಟದಲ್ಲಿ ವಾಸವಿದ್ದು, ಮನೆಯ ಸಮೀಪದಲ್ಲಿಯೇ ಕಾಯಿ ತುಂಬಲು ಶೆಡ್ಡು ನಿರ್ಮಿಸಿಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದು ಅಷ್ಟರೊಳಗೆ ಭಾಗಶಃ ಸುಟ್ಟು ಹೋಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ: ಉತ್ತಮ ಪಡಿಸಿಕೊಳ್ಳಲು ೨ನೇ ಪರೀಕ್ಷೆಗಾಗಿ ಅರ್ಜಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ೨ನೇ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇದೇ ೧೭ ಕೊನೆಯ ದಿನವಾಗಿದೆ.
ಇದೇ ಮೊದಲ ಬಾರಿಗೆ ಮಂಡಳಿಯು ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿದೆ. ಒಂದು ವೇಳೆ ೨ನೇ ಪರೀಕ್ಷೆ ಫಲಿತಾಂಶವು ಸಮಾಧಾನವಾಗದವರು ಪರೀಕ್ಷೆ ಮೂರನ್ನು ಬರೆಯಬಹುದು.

ಬಿಸಿಲಿನ ಶಾಖಾಘಾತ : ನಿರ್ಜನ ಪ್ರದೇಶದಲ್ಲಿ ಒಬ್ಬರೇ ಓಡಾಡುವುದು ತಪ್ಪಿಸಿ

ಬಳ್ಳಾರಿ: ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲು ಪ್ರಖರವಾಗಿ ಕಂಡುಬರುತ್ತಿದ್ದು, ಬಿಸಿಲಿನ ಶಾಖಾಘಾತಕ್ಕೆ ಒಳಗಾಗುವ ಸಂಭವ ಹೆಚ್ಚಿದ್ದು, ನಿರ್ಜನ ಪ್ರದೇಶದಲ್ಲಿ ಸಾರ್ವಜನಿಕರು ಒಬ್ಬರೇ ಓಡಾಡುವುದನ್ನು ತಪ್ಪಿಸುವ ಮೂಲಕ ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ವೈ.ರಮೇಶ ಬಾಬು ಕೋರಿದ್ದಾರೆ.             ಮಧ್ಯಾಹ್ನ 01 ರಿಂದ 04 ಗಂಟೆ ಅವಧಿಯಲ್ಲಿ ವಯೋವೃದ್ದರು, ಮಕ್ಕಳು, ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔ?ಧಿ ಸೇವಿಸುವ ಪ್ರತಿಯೊಬ್ಬರು ಆದ? ನೆರಳಿನಲ್ಲಿ ಇರುವುದಕ್ಕೆ ಆದ್ಯತೆ ನೀಡಬೇಕು. …

ಬಿಸಿಲಿನ ಶಾಖಾಘಾತ : ನಿರ್ಜನ ಪ್ರದೇಶದಲ್ಲಿ ಒಬ್ಬರೇ ಓಡಾಡುವುದು ತಪ್ಪಿಸಿ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಎಂದಿನಂತೆಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು : ಸಿ.ಎಂ.ಸಿದ್ದರಾಮಯ್ಯ

ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕಙ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ.

ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಲಾಗುವುದು. ಒಬ್ಬ ವ್ಯಕ್ತಿ ಅಂಗಾಂಗ ದಾನದ ಮೂಲಕ ಎಂಟು ಜನರಿಗೆ ಜೀವದಾನ ಮಾಡಬಹುದು ಎಂದು ಅವರು ತಿಳಿಸಿದರು.

ಸಮಾಜ ಸೇವೆ, ಶಿಕ್ಷಣ, ಪರೋಪಕಾರಿ ಡಿ.ಆರ್.ವಿಜಯ ಸಾರಥಿ

ಬೆಂಗಳೂರು : ಡಿ.ಅರ್. ವಿಜಯ ಸಾರಥಿ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಕಟ್ಟಿಗೇನ ಹಳ್ಳಿಯವರು. ಶಿಕ್ಷಣ ತಜ್ಞ, ಸಮಾಜ ಸೇವಕ ಮತ್ತು ಪರೋಪಕಾರಿ ವಲಯದಲ್ಲಿ ಗುರುತಿಸಿಕೊಂಡವರು.

Translate »
Scroll to Top