ಬರಗಾಲದ ಘೋಷಣೆ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಉತ್ತರ ಬಂದಿಲ್ಲ : C M ಸಿದ್ದರಾಮಯ್ಯ
ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.