ಕಲ್ಬುರ್ಗಿ

ವಿವಿಧ ಅಧಿಕಾರಿಗಳೊಂದಿಗೆ ಸಚಿವ ಭೈರತಿ ಸುರೇಶ್ ಸಭೆ

ಕಲ್ಬುರ್ಗಿ: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ನಗರ ಯೋಜನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಮಹಾನಗರ ಪಾಲಿಕೆ ಆಯುಕ್ತರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಸಿದರು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ  ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ: ಪ್ರತಿಭಟನೆ ರದ್ದು

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು, ಕಾನೂನು ಚೌಕಟ್ಟು ಮೀರದಂತೆ ವೈಜ್ಞಾನಿಕ ರೀತಿಯಲ್ಲಿ ಪರಿಶೀಲಿಸಿ ಶೀಘ್ರವಾಗಿ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.

ಗಣಿಗಾರಿಕೆ ನಿಯಮ ಸರಳೀಕರಣಗೊಳಿಸಲು ಪ್ರಿಯಾಂಕ್‌ ಖರ್ಗೆ ಅವರಿಗೆ ಮನವಿ

ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಇರುವ ತೊಡಕುಗಳನ್ನು ನಿವಾರಿಸಿ, ನಿಯಮಗಳನ್ನು ಸರಳಿಕರಣ ಮಾಡುವ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರುವದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು

‘ ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು’- ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ..

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಲು ಆಗಮಿಸಿದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಬಂದೋಬಸ್ತಿಗೆಂದು ಹಾಕಲಾಗಿದ್ದ ಬ್ಯಾರಿಕೇಡ್ ಒಳಗಿನಿಂದಲೇ ಮೋದಿ ಗಮನ ಸೆಳೆಯಲು ಪ್ರಯತ್ನಿಸುತ್ತಿರುವ ಸನ್ನಿವೇಶವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಗೊಂಡ ಸಮುದಾಯದ ಜಾತಿ ಪ್ರಮಾಣ ಪತ್ರ ಸಮಸ್ಯೆಗಳ ಕುರಿತು ಸಭೆ

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಗೊಂಡ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಎದುರಿಸುತ್ತಿರುವ  ಸಮಸ್ಯೆಗಳ ಕುರಿತು ಸಭೆ ಜರುಗಿತು.  ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಈಶ್ವರ ಖಂಡ್ರೆ, ನಾಗೇಂದ್ರ,  ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಲಬುರಗಿ, ಬೀದರ್, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು,  ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ: ರಾಕೇಶ್ …

ಗೊಂಡ ಸಮುದಾಯದ ಜಾತಿ ಪ್ರಮಾಣ ಪತ್ರ ಸಮಸ್ಯೆಗಳ ಕುರಿತು ಸಭೆ Read More »

ಗ್ರಾಮ ಪಂಚಾಯತಿ ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ

ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಇಂದು ರಾಜ್ಯ ಸರ್ಕಾರ ಆದೇಶಿಸಿದೆ.

ಕಲಬುರಗಿ ಕನೆಕ್ಟ್ ವೆಬ್ ಸೈಟ್ ಉದ್ಘಾಟನೆ

ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಆನ್ ಲೈನ್ ಮೂಲಕ ಸಲ್ಲಿಸುವ ಉದ್ದೇಶದಿಂದ ಕಲಬುರಗಿ ಕನೆಕ್ಟ್ ಎನ್ನಜವ ವೆಬ್ ಸೈಟ್ ನ್ನು ಇಂದು ಲಾಂಚ್ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ

ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ

ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

Translate »
Scroll to Top