ಚಾಮರಾಜನಗರ

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ನಾಗೇಂದ್ರ

ಚಾಮರಾಜನಗರ : ಸಚಿವರಾದ ಬಿ ನಾಗೇಂದ್ರ ಅವರು ಚಾಮರಾಜನಗರ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಸ್ಥಿತಿಗತಿಗಳನ್ನು ವಿಚಾರಿಸಿ ಅಪಘಾತದ ವಿವರ ಪಡೆದರು.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಲೆ ಏರಿಕೆ ನೀತಿ ಹಾಗೂ ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮಿಷನ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ : ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮಿಷನ್ ಹಗರಣದ ವಿರುದ್ಧ ಚಾಮರಾಜನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಹಿಳಾ ಘಟಕದ ಆಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಸಚಿವ ಪುಟ್ಟರಂಗ ಶೆಟ್ಟಿ, ಶಾಸಕರಾದ ನರೇಂದ್ರ, ಡಾ. ತಿಮ್ಮಯ್ಯ, ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಹಾಜರಿದ್ದರು.

ಮಲೆಮಹದೇಶ್ವರ ಜಾತ್ರಾಮಹೋತ್ಸವ ಪೂರ್ವಸಿದ್ಧತೆ ಸಭೆ

ಚಾಮರಾಜನಗರ: ಫೆ.17-  ವಸತಿ , ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಚಾಮರಾಜನಗರ ಜಿಲ್ಲೆಯ “ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ” ವತಿಯಿಂದ  2022ನೇ ಸಾಲಿನಲ್ಲಿ ಜರುಗುವ ಮಹಾ ಶಿವರಾತ್ರಿ ಮತ್ತು ಯುಗಾದಿ ಜಾತ್ರಾ ಕಾಯ೯ಕ್ರಮಗಳ ಪೂವ೯ಸಿದ್ದತೆ ” ಗಳ ಕುರಿತು  ಮುಜರಾಯಿ ಸಚಿವರು ಮತ್ತು  ಜಿಲ್ಲೆಯ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಇಂದು ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಚಿವರು, ಶಿವರಾತ್ರಿ ಸಂದಭ೯ದಲ್ಲಿ  …

ಮಲೆಮಹದೇಶ್ವರ ಜಾತ್ರಾಮಹೋತ್ಸವ ಪೂರ್ವಸಿದ್ಧತೆ ಸಭೆ Read More »

ಹಿಜಾಬ್ ವಿವಾದ

ಚಾಮರಾಜನಗರ,15 : ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮಗೆ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಇದನ್ನು ಯಾರೂ ಕೂಡ ದುರ್ಬಳಕೆ ಮಾಡಿಕೊಳ್ಳಬಾರದು. ಅದಕ್ಕೆಲ್ಲ ನಾವು ಅವಕಾಶ ಮಾಡಿಕೊಡುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮಂಗಳವಾರ ತೀಳಿದರು.

ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಬೆದರಿಕೆ : ಅಪರಾಧಿಗೆ ಶಿಕ್ಷೆ

 ಚಾಮರಾಜನಗರ, ಜನವರಿ.29:- ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಬಲವಂತ ಪಡಿಸಿದಲ್ಲದೇ ಪ್ರೀತಿಸದಿದ್ದಲ್ಲಿ  ನಿನ್ನ ಅಣ್ಣನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 22 ದಿನ ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. 

ಮೇಕೆದಾಟು ಯೋಜನೆ ಜಾರಿ ಕುರಿತಾದ ಜನಜಾಗೃತಿ ಸಭೆ

ಚಾಮರಾಜನಗರ, ಜ,2 : ಈ ಹಿಂದೆ ಕೊರೊನಾ ರೋಗ ಹೆಚ್ಚಾದಾಗ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದರು. ಆಗ ಮೃತರ ಕುಟುಂಬದವರನ್ನು ಸಂತೈಸಿ, ಅವರಿಗೆ ನ್ಯಾಯ ದೊರಕಿಸಿಕೊಡಲು ಚಾಮರಾಜನಗರಕ್ಕೆ ಕಡೆಯದಾಗಿ ಬಂದಿದ್ದೆ. ರಾಜ್ಯ ಸರ್ಕಾರದ ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸತ್ತಿದ್ದು ಕೇವಲ ಮೂರೆ ಮಂದಿ ಎಂದು ಸುಳ್ಳು ಹೇಳಿದ್ದರು, ಜನತ್ತಿಗೆ ಸತ್ಯವನ್ನು ತೆರೆದಿಡಲು ನಾನು ಚಾಮರಾಜನಗರಕ್ಕೆ ಬಂದು, ವೈದ್ಯರು, ಅಧಿಕಾರಿಗಳೊಂದಿಗೆ ಸಭೆ ಮಾಡಿ ಸತ್ತವರ …

ಮೇಕೆದಾಟು ಯೋಜನೆ ಜಾರಿ ಕುರಿತಾದ ಜನಜಾಗೃತಿ ಸಭೆ Read More »

ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ

ಚಾಮರಾಜನಗರ, ಜ, 2 : ಚಾಮರಾಜನಗರಕ್ಕೆ ತೆರಳುವ ಮಾರ್ಗದಲ್ಲಿ ಕೊಳ್ಳೇಗಾಲಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಶಾಸಕ ನರೇಂದ್ರ, ಮಾಜಿ ಶಾಸಕರಾದ ಜಯಣ್ಣ, ಬಾಲರಾಜು, ಕೃಷ್ಣಮೂರ್ತಿ ಹಾಜರಿದ್ದರು.

Translate »
Scroll to Top