ಚಿತ್ರದುರ್ಗ

ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರದುರ್ಗ: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಮತ್ತು ಆರ್ ಎಸ್ ಎಸ್ ಅನ್ನು ತಿರಸ್ಕರಿಸಿ : ಸಿದ್ದರಾಮಯ್ಯ

ಚಿತ್ರದುರ್ಗ : ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಲೋಕಸಭಾ ಚುನಾವಣೆಯಲ್ಲಿ 15-20 ಸ್ಥಾನ ಗೆಲ್ಲುತ್ತೇವೆ : ಸಿದ್ದರಾಮಯ್ಯ

ಚಿತ್ರದುರ್ಗ : ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪಿ.ಹೆಚ್.ಡಿ. ಪದವಿ ಮುಗಿಸಿದ ತೊರೆಕೋಲಮ್ಮನಹಳ್ಳಿ ನಾಗೇಶ

ನಾಯಕನಹಟ್ಟಿ : ಹೋಬಳಿಯ ತೊರೆಕೋಲಮ್ಮನಹಳ್ಳಿ ಗ್ರಾಮದ ಗ್ರಾಮೀಣ ಪ್ರದೇಶದ ಅತ್ಯಂತ ಬಡ ಕುಡುಂಬದಲ್ಲಿ ಜನಿಸಿದ ನಾಗೇಶರವರು ಕನ್ನಡ ಭಾಷೆ ಅಭ್ಯಾಸ ಪುಸ್ತಕಗಳ ಭಾಷಿಕ ಮತ್ತು ಶೈಕ್ಷಣಿಕ ಅಧ್ಯಯನ ಎಂಬ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ. ಪದವಿಯನ್ನು ಪಡೆದುಕೊಂಡಿದ್ದಾರೆ.

ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಟ : ರೈತರ ಬೆಳೆ ಹಾನಿ  

ನಾಯಕನಹಟ್ಟಿ : ನಾಯಕನಹಟ್ಟಿ ಸಮೀಪದ ವರವುಕಾವಲು ಗ್ರಾಮದ ಜಮೀನುಗಳಲ್ಲಿ ಜೆಸಿಬಿ ಹಾಗೂ ಟಿಪ್ಪರ್ ಬಳಸಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡುತ್ತಿದ್ದಂತೆಯೇ ವಾಹನಗಳನ್ನು ನಿಲ್ಲಿಸದೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಹೊಸಪೇಟೆಯಲ್ಲಿ ಡಿ.31ರಂದು 5 ಕೋಟಿ ರೂ. ಅರಣ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ದಾವಣಗೆರೆ : ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ (ಎಸ್.ಎಫ್.ಓ.)ಗಳನ್ನು ನಿಯೋಜಿಸುವುದಾಗಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಪತಿಯಿಂದಲೇ ಪತ್ನಿ ಮೇಲೆ ಕೊಲೆಗೆ ಯತ್ನ

ಚಳ್ಳಕೆರೆ: ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ ಬೆಳಗ್ಗೆ 11 ಗಂಟೆ ಸುಮಾರಿಗೆ ಬಸ್ ಇಳಿದು ಬರುವ ಆಶಾ ಎಂಬುವವರ ಮೇಲೆ ತನ್ನ ಪತಿ ಶಿವಕುಮಾರ್ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿದ ಘಟನೆ ನಡೆದಿದ್ದು, ಈ ಘಟನೆ ಇಡೀ ನಗರವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ.

ಕಮಲಕ್ಕೆ ಕೈ ಕೊಟ್ಟ ಪೂರ್ಣಿಮ ಶ್ರೀನಿವಾಸ್

ಬೆಂಗಳೂರು: ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಭಯ ನೀಡಿದರು.

ಸರ್ಕಾರಿ ಬಸ್ ಗಳನ್ನು ನಿಲ್ಲಿಸಲು ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ

ನಾಯಕನಹಟ್ಟಿ : ತಳುಕು, ಬಿಜಿಕೆರೆ,ಹಿರೇಹಳ್ಳಿ, ಹಾನಗಲ್ ಗ್ರಾಮಗಳ ಬಸ್ ನಿಲ್ದಾಣಗಳಿಗೆ ksrtc ಬಸ್ ಗಳು ಬಂದು ಹೋಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಚಳ್ಳಕೆರೆ ವಿಕಲಚೇತನರ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು.

ಶೀಘ್ರ ಬೆಳೆ ಸಮೀಕ್ಷೆ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಚಿತ್ರದುರ್ಗ: ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ನಡೆಸಿ ಸಂಪೂರ್ಣ ಮಾಹಿತಿಯನ್ನು “ಫ್ರೂಟ್ಸ್ ತಂತ್ರಾಂಶ”ದಲ್ಲಿ ನಮೂದಿಸಿದರೆ ಮಾತ್ರ ರೈತರಿಗೆ ಬೆಳೆ ನಷ್ಟ ತುಂಬಿಕೊಡಲು ಸಾಧ್ಯ. ಆ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರದಲ್ಲಿ ಬೆಳೆ ಸಮೀಕ್ಷೆ ನಡೆಸಿದ ಅಂಕಿಅಂಶಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

Translate »
Scroll to Top