ತುಮಕೂರು

ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಂಠಿತ

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲುಕಿನಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಪ್ರಮಾಣವೂ ಇಳಿಮುಖವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಂತೆ ಈ ವರ್ಷವೂ ಸಹ ಮಳೆ ಬೀಳಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶೆಟ್ಟಿಗೊಂಡನಹಳ್ಳಿ ಸಮೀಪ ಮೂರು ದ್ವಿಚಕ್ರ ವಾಹನಗಳು ಮುಖಾಮುಖಿ ನಾಲ್ವರ ದುರ್ಮರಣ

ತುರುವೇಕೆರೆ : ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಯಡಿಯೂರು ಕಲ್ಲೂರು ಮುಖ್ಯರಸ್ತೆಯಲ್ಲಿ ಏಕಕಾಲದಲ್ಲಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಜಲಧಿಗೆರೆ ಕಡೆಯಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಲ್ಲೂರು ಕಡೆಗೆ  ಡಿಸ್ ಕವರ್ ಮತ್ತು ಪಲ್ಸರ್ ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರು ತೆರಳುತ್ತಿದ್ದರು ಎನ್ನಲಾಗಿದ್ದು ಇತ್ತ ಕಲ್ಲೂರು ಕಡೆಯಿಂದ ಸ್ಪೆಂಡರ್ ಬೈಕಿನಲ್ಲಿ  ಇಬ್ಬರು ಬರುತ್ತಿದ್ದರು ಎನ್ನಲಾಗಿದೆ. ಈ ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ  ನಾಲ್ಕು …

ಶೆಟ್ಟಿಗೊಂಡನಹಳ್ಳಿ ಸಮೀಪ ಮೂರು ದ್ವಿಚಕ್ರ ವಾಹನಗಳು ಮುಖಾಮುಖಿ ನಾಲ್ವರ ದುರ್ಮರಣ Read More »

ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ ಮಕ್ಕಳಿಗೆ ಸಿಎಂ ಬುದ್ಧಿಮಾತು

ತುಮಕೂರು: ಮಕ್ಕಳು ತಮ್ಮ ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ವಿದ್ಯಾದೇವತೆ ಸರಸ್ವತಿಯ ವಾಹನ ಹಂಸದಂತೆ, ಮಕ್ಕಳು ಜ್ಞಾನದ ತೂಕವನ್ನು ಪಡೆದು, ಯಶಸ್ಸಿನ ಎತ್ತರಕ್ಕೆ ಹಾರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಕ್ಕಳಿಗೆ ಬುದ್ಧಿಮಾತು ಹೇಳಿದರು. ಅವರು ಇಂದು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಪ್ರಾರಂಭೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳು ಜ್ಞಾನದ ಬಾಗಿಲನ್ನು ತೆರೆದಿಟ್ಟುಕೊಳ್ಳುವ ಮೂಲಕ ಅವರಲ್ಲಿ ಕಲಿಕೆ ನಿರಂತರವಾಗುತ್ತದೆ. ಅಂತೆಯೇ ಬದುಕಿನಲ್ಲಿ ಯಶಸ್ಸೂ …

ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ ಮಕ್ಕಳಿಗೆ ಸಿಎಂ ಬುದ್ಧಿಮಾತು Read More »

ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ

ತುಮಕೂರು: ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಆಲದ ಮರದ ಪಾರ್ಕ್ ನ ನಿರ್ವಹಣಾ ಜವಾಬ್ದಾರಿಯನ್ನು ತುಮಕೂರಿನ ಪ್ರೆಸ್ ಕ್ಲಬ್ ಇವರಿಗೆ ಹಸ್ತಾಂತರಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪಾರ್ಕ್ ನಿರ್ವಹಣೆಯ ಹೊಣೆಯನ್ನು ಪ್ರೆಸ್ ಕ್ಲಬ್‍ ಹೊತ್ತಿರುವುದು ದಿಟ್ಟ ಹೆಜ್ಜೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 65 ಲಕ್ಷ ರೂ.ಗಳನ್ನು ಇದಕ್ಕೆ ವೆಚ್ಚ ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ …

ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ Read More »

ತುಮಕೂರು ಜಿಲ್ಲೆಯ ಹಿರಿಯ ಅಧಿಕಾರಿ ಗಳೊಂದಿಗೆ ಸಭೆ

ತುಮಕೂರು : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಉಸ್ತುವಾರಿ ತುಮಕೂರು ಜಿಲ್ಲೆಯ ಹಿರಿಯ ಅಧಿಕಾರಿ ಗಳೊಂದಿಗೆ, ಸಭೆ ನಡೆಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಸೂಕ್ತ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಶ್ರೀ ವೈ ಎಸ್ ಪಾಟೀಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಗಿ ನೊಂದಣಿ ದಿಡೀರ್ ಸ್ಥಗಿತ ರೈತರ ಆಕ್ರೋಶ

ಹುಳಿಯಾರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವ ಸಲುವಾಗಿ ಸರ್ಕಾರ ೨ ನೇ ಹಂತದ ನೊಂದಣಿ ಕಾರ್ಯ ಆರಂಭಿಸಿದ ೨೭ ಗಂಟೆಯೊಳಗೆ ಸ್ಥಗಿತಗೊಳಿಸಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.ಮೊದಲ ಹಂತದ ರಾಗಿ ಖರೀದಿ ಪ್ರಕ್ರಿಯೆ ಮುಗಿದು ರೈತರ ಖಾತೆಗಳಿಗೆ ಹಣ ವರ್ಗಾವಣೆಯಾದ ನಂತರ ೨ ನೇ ಹಂತದ ರಾಗಿ ಖರೀದಿಗಾಗಿ ನೊಂದಣಿ ಕಾರ್ಯಕ್ಕೆ ಸರ್ಕಾರ ಹಸಿರು ನಿಶಾನೆ ತೋರಿತ್ತು. ಆದರೆ ಏ.೨೫ ರಂದು ನೊಂದಣಿ ಕಾರ್ಯ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ ಸಹ ಏ.೨೬ ರ ಮಧ್ಯಾಹ್ನದವರೆವಿಗೂ ನೊಂದಣಿ ಕಾರ್ಯ ಆರಂಭವಾಗಲಿಲ್ಲ. …

ರಾಗಿ ನೊಂದಣಿ ದಿಡೀರ್ ಸ್ಥಗಿತ ರೈತರ ಆಕ್ರೋಶ Read More »

ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ

ತುಮಕೂರು : ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಜೆ.ಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಸಂಸದ ಹೆಚ್.ಡಿ. ದೇವೇಗೌಡರು ತಮಗೆ ಕರೆ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರು ನಮ್ಮ ಹಿರಿಯರು. ನನಗೆ ಕರೆ …

ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ Read More »

ಜೀವನದಲ್ಲಿ ಮೂರು ಬಾರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದೇನೆ

ತುಮಕೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಜೀವನದಲ್ಲಿ ಮೂರು ಬಾರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದೇನೆ, ಇಲ್ಲಿಗೆ ಬಂದಾಗಲೆಲ್ಲ ಉತ್ಸಾಹ ಹೆಚ್ಚಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು. ದೇಶ ಸಂಸ್ಕೃತಿಯ ತವರೂರು, ಜ್ಯೋತಿರ್ಲಿಂಗಗಳು, ಪುರಾಣಗಳು ಇವೆ, ಪುಣ್ಯ ಸ್ಥಳಗಳು ಇವೆ ಆದರೆ ಶಿವಕುಮಾರ ಸ್ವಾಮೀಗಳು ತಮ್ಮ ಸೇವೆಯಿಂದ ಪುಣ್ಯಕ್ಷೇತ್ರವನ್ನು ಮಾಡಿದರು ಎಂದು ಹೇಳಿದರು. ಅಟಲ್ ಜೀ ಇಲ್ಲಿಗೆ ಬಂದಾಗ ಉತ್ತರದಲ್ಲಿ ಗಂಗಾ ದಕ್ಷಿಣದಲ್ಲಿ ಸಿದ್ಧಗಂಗಾ ಎಂದಿದ್ದರು, ಗಂಗಾದಲ್ಲಿ ಮುಳುಗಿದರೆ ಪಾಪ ಹೋಗುತ್ತದೆ, ಸಿದ್ಧಗಂಗೆಗೆ ಬಂದರೆ ಜನ್ಮಜನ್ಮಾಂತರದ …

ಜೀವನದಲ್ಲಿ ಮೂರು ಬಾರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದೇನೆ Read More »

ಗದ್ದುಗೆಗೆ ವಿಶೇಷ ಪೂಜೆ, ಕಂಚಿನ ಪ್ರತಿಮೆ ಮೆರವಣಿಗೆ

ತುಮಕೂರು : ಡಾ.ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ ನಡೆನಾಡಿದ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿಯಾಗುತ್ತಿದ್ದಾರೆ. ಇತ್ತ ಇನ್ನೊಂದೆಡೆ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ, ನೆರವೇರಿಸಲಾಗುತ್ತಿದೆ. ಬೆಳಿಗ್ಗೆ ಐದು ಗಂಟೆಯಿಂದಲೇ ವಿವಿಧ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಅಭಿಷೇಕ ನಡೆದಿವೆ.‌ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಶ್ರೀಗಳ ಗದ್ದುಗೆಗೆ …

ಗದ್ದುಗೆಗೆ ವಿಶೇಷ ಪೂಜೆ, ಕಂಚಿನ ಪ್ರತಿಮೆ ಮೆರವಣಿಗೆ Read More »

Translate »
Scroll to Top