ಪ್ರಾಥಮಿಕ ಆರೋಗ್ಯ ಕೇಂದ್ರ ಮೀರಾಸಾಬಿ ಹಳ್ಳಿಯಲ್ಲಿ ವಿಶ್ವ ಸೊಳ್ಳೆ ದಿನಾಚರಣೆ
1897ರ ಆಗಸ್ಟ್ 20ರಂದು ಬ್ರಿಟಿಷ್ ಸೇನೆಯ ಸರ್ಜನ್ ಸರ್ ರೊನಾಲ್ಡ್ ರೋಲ್ಸ್ ಎನ್ನುವ ಜೀವವಿಜ್ಞಾನಿಯು ಜನರಿಗೆ ಮೃತ್ಯುಕೂಪವೆನ್ನಿಸುವ ಮಲೇರಿಯಾ ರೋಗವು ಪ್ಯಾರಸೈಟ್ ಮೂಲಕ ಹರಡಲು ಅನಾಫೆಲಿಸ್ ಎನ್ನುವ ಹೆಣ್ಣು ಸೊಳ್ಳೆಯು ಕಾರಣವೆಂದು ಜಗತ್ತಿಗೆ ವಿವರಿಸಿದ ದಿನವಾಗಿದೆ. ಈ ಸೊಳ್ಳೆಯು ಇಷ್ಟೊಂದು ಭೀಕರ, ಆಘಾತಕಾರಿ ವ್ಯಾಧಿಯನ್ನು ಹರಡುತ್ತದೆ ಎಂಬ ಕಲ್ಪನೆಯು ಜನರಿಗೆ ಅದುವರೆಗೂ ಇರಲಿಲ್ಲ. ಹೀಗೆ ಅರಿವನ್ನು ಮೂಡಿಸಿದ ಆ ವಿಜ್ಞಾನಿಯ ನೆನಪಿಗಾಗಿ ಆಗಸ್ಟ್ 20 ವಿಶ್ವ ಸೊಳ್ಳೆಗಳ ದಿವಸವೆಂದು ಆಚರಿಸಲಾಗುತ್ತದೆ.