ಬಳ್ಳಾರಿ

ದಾಖಲೆಯಿಲ್ಲದ 8.23 ಲಕ್ಷ ಹಣ ಪೊಲೀಸರ ವಶ

ಕಂಪ್ಲಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, 91-ಕಂಪ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಂಪ್ಲಿ-ಕೋಟೆ ಚೆಕ್ ಪೋಸ್ಟ್ನಲ್ಲಿ ಶುಕ್ರವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧಿಕೃತವಾಗಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8ಲಕ್ಷ23 ಸಾವಿರ ರೂಪಾಯಿ ಹಣವನ್ನು ಕಂಪ್ಲಿ ಪೊಲೀಸರು ವಶಕ್ಕೆ ಪಡೆಸಿದ್ದಾರೆ.

ರೈತರ ಸಮಸ್ಯೆಗಳ ಗಮನಹರಿಸದ ರಾಜಕೀಯ ಪಕ್ಷಗಳ ಮುಖಂಡರಿಗೆ ಛೀ ಮಾರಿ  ಹಾಕಿದ ರೈತ ಮುಖಂಡರು

ಬಳ್ಳಾರಿ : ಕುಡಿಯುವ ನೀರು, ದನಕರುಗಳಿಗೆ ಮೇವು, ಕೃಷಿ ಪಂಪ್ಸೆಟ್ಟುಗಳಿಗೆ ವಿದ್ಯುತ್ ಸಮಸ್ಯೆ ಸೇರಿದಂತೆ ಇನ್ನಿತರೆ ಸಮಸ್ಯೆಗಳು ರಾಜ್ಯದಲ್ಲಿನ ರೈತರನ್ನ ಸಂಕಷ್ಟಕ್ಕೀಡುಮಾಡಿವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.

ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷದಿಂದ 28 ಕ್ಷೇತ್ರಗಳಲ್ಲಿಯೂ ಸ್ಪರ್ಧೆ

ಬಳ್ಳಾರಿ : 2025ರ ಲೋಕಸಭಾ ಚುನಾವಣೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಬಿ) ಭಾರತದ ಹಲವಾರು ರಾಜ್ಯಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧಿಸಲಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಚುನಾವಣೆಯ ಪೂರ್ವ ತಯಾರಿಗಾಗಿ 7 ರಾಜ್ಯಗಳಲ್ಲಿ ಪ್ರವಾಸ ಮಾಡಲಾಗಿದೆ ಎಂದು ಆರ್.ಪಿ.ಐನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಡಿಎಸ್ಎಸ್ನ ರಾಜ್ಯಾಧ್ಯಕ್ಷ ಡಾ.ಎನ್. ಮೂರ್ತಿ ತಿಳಿಸಿದರು.

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಳ್ಳಾರಿ,ಮಾ.25: 2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಉಪಾಧ್ಯ ತಿಳಿಸಿದರು.

ಸಂಡೂರು ಶಾಸಕ ತುಕಾರಾಂಗೆ ಕಾಂಗ್ರೆಸ್ ಟಿಕೆಟ್..?

ಬಳ್ಳಾರಿ : ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಕಗ್ಗಂಟು ಇದೀಗ ಸಡಿಲಗೊಂಡಿದೆ ಎಂತಲೂ, ಎಲ್ಲರ ಸರ್ವ ಸಮ್ಮತ ಅಭಿಪ್ರಾಯದಂತೆ, ನಾಲ್ಕು ಬಾರಿ ಸಂಡೂರು ಶಾಸಕರಾಗಿ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿರುವ ಶಾಸಕ ಇ.ತುಕಾರಾಂ ಅವರ ಹೆಸರು ಫೈನಲ್ ಆಗಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪವರ್ ಸ್ಟಾರ್ ಯುವಕರ ಪಾಲಿನ ಕಣ್ಮಣಿ: ಬಿ.ಶ್ರೀರಾಮುಲು

ಬಳ್ಳಾರಿ : ಕನ್ನಡ ಚಿತ್ರರಂಗದ ಪವರ್ ಸ್ಟಾರ್, ಸ್ಯಾಂಡಲ್ವುಡ್ನ ಹೈವೋಲ್ಟೇಜ್ ಕರೆಂಟ್ ಅಂತಲೇ ಕರೆಯಿಸಿಕೊಳ್ಳುತ್ತಿದ್ದವರು ಪುನೀತ್ ರಾಜ್ಕುಮಾರ್ ಎಂದು ಬಳ್ಳಾರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಹೇಳಿದರು.

ಬಳ್ಳಾರಿಯ ರಾಯರ ಮಠಕ್ಕೆ ಬಿ.ಶ್ರೀರಾಮುಲು ಭೇಟಿ

ಬಳ್ಳಾರಿ :ಶ್ರೀರಾಘವೇಂದ್ರ ಗುರುಸಾರ್ವಭೌಮರ 403ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 429 ವರ್ಧಂತಿ ಉತ್ಸವದ ಅಂಗವಾಗಿ ಮಾರ್ಚ್ 11ರಿಂದ ಇಂದಿನವರೆಗೂ ರಾಯರ ಮಠದಲ್ಲಿ ರಾಘವೇಂದ್ರ ಗುರು ವೈಭವೋತ್ಸವ ಕಾರ್ಯಕ್ರಮ ನಡೆಯಿತ್ತೀದ್ದು ಬಿಜೆಪಿ ಬಳ್ಳಾರಿ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಭೇಟಿ ನೀಡಿದರು.

ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ನೀಡಲು ಆಗ್ರಹ

ಬಳ್ಳಾರಿ: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ಸೇರಿದದಂತೆ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಶೌಚಾಲಯಗಳು ಇಲ್ಲ ಹಾಗೂ ಸುಮಾರು 250ಕ್ಕೂ ಹೆಚ್ಚು ಬಡ ಕುಟುಂಬಗಳು ನಿವೇಶನ ಮತ್ತು ವಸತಿ ಇಲ್ಲದೆ ಲಭ್ಯವಿರುವ ಚಿಕ್ಕಗುಡಿಸಲಲ್ಲಿ ಮೂರು ನಾಲ್ಕು ಕುಟುಂಬಗಳು ಒತ್ತಡದ ಸಂಕಷ್ಟದಲ್ಲಿ ವಾಸಿಸುತ್ತಿದ್ದು, ಮೂಲಭೂತ ಸೌಲಭ್ಯಗಳು ಮರೆ ಮಾಚಿವೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಪೆಡರೇಷನ್ ನ ಜಿಲ್ಲಾ ಅಧ್ಯಕ್ಷ ಯು.ಎರ್ರಿಸ್ವಾಮಿ ಅವರು ಹೇಳಿದರು.

ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಬಳ್ಳಾರಿ ವಿವಿಯ ನೂತನ ಕುಲಪತಿಗಳಾಗಿ ಪ್ರೊ.ಕೆ.ಎಂ.ಮೇತ್ರಿ ನೇಮಕ

ಬಳ್ಳಾರಿ : ಬಳ್ಳಾರಿ ವಿವಿಯ ಕುಲಪತಿಗಳಾಗಿದ್ದ ಸಿದ್ದು ಪಿ ಅಲಗೂರು ಅವರು ನಿವೃತ್ತಿ ಹೊಂದಿದ ನಂತರ ಸರಿ ಸುಮಾರು ಆರೇಳು ತಿಂಗಳ ಕಾಲ ಪ್ರಭಾರಿ ಕುಲಪತಿಗಳೇ ಆಡಳಿತ ನಡೆಸುತ್ತಿದ್ದರು. ಈ ಸ್ಥಾನ ಭರ್ತಿ ಮಾಡಲು ಇದೀಗ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ.

Translate »
Scroll to Top