ಸರ್ಕಾರದ ದೃಷಿಯಲ್ಲಿ ಎಲ್ಲರೂ ಸಮಾನರು
ಬೀದರ್ : ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ವಕ್ಫ್ ಬೋರ್ಡ್ ಬ್ಯಾನ್ ಅಭಿಯಾನಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ. ರಾಜ್ಯದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಸವಕಲ್ಯಾಣದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ಮುನ್ನ ವಕ್ಫ್ ಬೋರ್ಡ್ ಬ್ಯಾನ್ ಅಭಿಯಾನಕ್ಕೆ ಪ್ರಮೋದ್ ಮುತಾಲಿಕ್ ಕರೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು. ಅವರವರ ಸಂಪ್ರದಾಯವನ್ನು ಅವರು ಆಚರಣೆ ಮಾಡುತ್ತಾರೆ. ಸರ್ಕಾರ ಕಾನೂನಿನ ಪ್ರಕಾರ …