ಬೆಂಗಳೂರು

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ನಾಗೇಂದ್ರ

ಚಾಮರಾಜನಗರ : ಸಚಿವರಾದ ಬಿ ನಾಗೇಂದ್ರ ಅವರು ಚಾಮರಾಜನಗರ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಸ್ಥಿತಿಗತಿಗಳನ್ನು ವಿಚಾರಿಸಿ ಅಪಘಾತದ ವಿವರ ಪಡೆದರು.

ಬಿಪಿಎಲ್ ಕಾರ್ಡ್: ಜೂ.1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ.

ಘಮ ಘಮಿಸಿದ ವೆರೈಟಿ ಮಾವು, ಹಲಸು

ರಾಜ್ಯದಲ್ಲಿ ಮಾವು ಹಾಗೂ ಹಲಸು ಹಣ್ಣಿನ ಋತುಮಾನ ಆರಂಭವಾಗಿದ್ದು, ಈಗ ಹಣ್ಣಿನ ಸುಗ್ಗಿ ನಡೆಯುತ್ತಿದೆ.

ವರ್ಷಕ್ಕೊಮ್ಮೆ ಬೆಳೆಯುವ ಹಣ್ಣುಗಳ ರಾಜ ಮಾವಿನ ಹಣ್ಣನ್ನು ಕಡಿಮೆ ಬೆಲೆಗೆ ಖರೀದಿಸಿ ತಿನ್ನಲು ಮಾವು ಮೇಳವನ್ನೇ ಆಯೋಜನೆ.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ; ಯಾವ್ಯಾವ ಖಾತೆ ಯಾರಿಗೆ ಇಲ್ಲಿದೆ ಪಟ್ಟಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪ್ರಕಟವಾಗಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ 

ಬೆಂಗಳೂರು: “ನಾನು ಬಾಡಿಗೆ ಮನೆಯಿಂದ ಬಂದವನಲ್ಲ ನಾನು, ಸ್ವಂತ ಮನೆಯಲ್ಲಿ ಇರುವವ. ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ ಎಂದು ಹಿರಿಯ ಮುಖಂಡ, ಮೇಲ್ಮನೆ ಸದಸ್ಯ ಬಿಕೆ ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೇಲ್ಮನೆಯಲ್ಲಿ ವಿಪಕ್ಷ ನಾಯಕರು,  ಸಭಾನಾಯಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಪ್ರದಾಯವಿತ್ತು.  ಆದರೆ ಈ ಬಾರಿ ಸಂಪ್ರದಾಯ ಮುರಿದಿದ್ದಾರೆ.  ಸಚಿವ ಸ್ಥಾನ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ ಎಂದರು. ವಿಧಾನಪರಿಷತ್ತಿನಲ್ಲಿ ಸಭಾನಾಯಕರನ್ನಾಗಿ ಯಾರನ್ನು ನೇಮಿಸಬೇಕು ಎಂಬ ಕುರಿತು  ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ಕೇಳಿ. ಆದರೆ ತಾವು ಮೇಲ್ಮೆಗೆ ರಾಜೀನಾಮೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ. …

ರಾಜೀನಾಮೆ ಕೇವಲ್ ವಾಟ್ಸಪ್ ಯೂನಿವರ್ಸಿಟಿ ಸೃಷ್ಟಿ  Read More »

ಪ್ರಮುಖ ನಾಯಕರಿಗೆ ಸಿಗದ ಮಂತ್ರಿ ಸ್ಥಾನ

ನಂಜುಂಡಪ್ಪ.ವಿ. ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ಆರ್.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ ಮತ್ತಿತರ ಪ್ರಮುಖ ಹಿರಿಯ ನಾಯಕರಿಗೆ ಈ ಬಾರಿ ಸಚಿವ ಸ್ಥಾನ ದೊರೆತಿಲ್ಲ. ಕಳೆದ ಮೂರುವರೆ ದಶಕಗಳಿಂದ ಮುಟ್ಟಿದ್ದೆಲ್ಲವೂ ಚಿನ್ನ. ಪ್ರತಿ ಹಂತದಲ್ಲೂ ಗೆಲುವು ಸಾಧಿಸುತ್ತಿದ್ದ, ವರಿಷ್ಠರನ್ನು ಓಲೈಸಿ ಹೇಗಾದರೂ ಮಾಡಿ ಉನ್ನತ ಸ್ಥಾನಮಾನ ಪಡೆಯುತ್ತಿದ್ದ ನಾಯಕರಿಗೆ ಈ ಬಾರಿ ಹೈ ಕಮಾಂಡ್ ಚೆಳ್ಳೆ ಹಣ್ಣು ತಿನ್ನಿಸಿದೆ. ಬಿ.ಕೆ. ಹರಿಪ್ರಸಾದ್ ಯಾವತ್ತೂ ಸಚಿವರಾಗಲಿಲ್ಲ. ಯಾವುದೇ ಚುನಾವಣೆ ಗೆಲ್ಲಲಿಲ್ಲ.  ಆದರೆ ಕಾಂಗ್ರೆಸ್ ವರಿಷ್ಠರ …

ಪ್ರಮುಖ ನಾಯಕರಿಗೆ ಸಿಗದ ಮಂತ್ರಿ ಸ್ಥಾನ Read More »

ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ ಸಿಕ್ಕಿದೆ ನೋಡಿ..

ಬೆಂಗಳೂರು: ರಾಜಭವನದಲ್ಲಿಂದು 11;45 ಕ್ಕೆ ಆರಂಭವಾದ ಸಮಾರಂಭದಲ್ಲಿ ಇಪ್ಪತ್ನಾಲ್ಕು ಮಂದಿ ನೂತನ ಸಚಿವರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೌಪ್ಯತಾ ಪ್ರತಿಜ್ಞಾ ವಿಧಿ ಭೋಧಿಸಿದರು.ಆ ಮೂಲಕ ಒಟ್ಟು 34 ಮಂದಿ ಸಚಿವರೊಂದಿಗೆ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದಂತಾಗಿದ್ದು, ಇದೀಗ ಎಲ್ಲಾ ಸಚಿವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಹಾಗಾದರೆ  ನೂತನ ಸಚಿವರಿಗೆ ಸಿಕ್ಕ ಖಾತೆ ಯಾವುದು ಒಮ್ಮೆ ನೋಡಿ ಬಿಡಿ

ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದ ಸಚಿವ ಸಂಪುಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಇಂದು ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಹಿರಿಯ ನಾಯಕರಾದ ಹೆಚ್.ಸಿ.ಮಹದೇವಪ್ಪ,ಕೆ,ವೆಂಕಟೇಶ್,ಚಲುವರಾಯಸ್ವಾಮಿ,ಪುಟ್ಟರಂಗಶೆಟ್ಟಿ ಸೇರಿದಂತೆ ಇಪ್ಪತ್ನಾಲ್ಕು ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿಂದು 11;45 ಕ್ಕೆ ಆರಂಭವಾದ ಸಮಾರಂಭದಲ್ಲಿ ಇಪ್ಪತ್ನಾಲ್ಕು ಮಂದಿ ನೂತನ ಸಚಿವರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೌಪ್ಯತಾ ಪ್ರತಿಜ್ಞಾ ವಿಧಿ ಭೋಧಿಸಿದರು. ಸುಮಾರು ಎಂಭತ್ತೈದು ನಿಮಿಷಗಳ ಕಾಲ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥ್ಯಾವರ್ ಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ವೇದಿಕೆಯ …

ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದ ಸಚಿವ ಸಂಪುಟ Read More »

ಇಂದು ಬೆಳಿಗ್ಗೆ 11.45 ಕ್ಕೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು/ಬಳ್ಳಾರಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಗಿದಿದ್ದು, ಇಂದು ಬೆಳಿಗ್ಗೆ 11.45 ಕ್ಕೆ 24 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಮೂಲಕ 34 ಸದಸ್ಯರು ಪೂರ್ಣ ಪ್ರಮಾಣದ ಸಂಪುಟ ಅಸ್ಥಿತ್ವಕ್ಕೆ ಬರಲಿದೆ. ರಾಜಭವನಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ರವಾನಿಸಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗಾಜಿನ ಮನೆಯಲ್ಲಿ ವೇದಿಕೆ ಸಜ್ಜುಗೊಂಡಿದೆ. ವರಿಷ್ಠರ ಸಮ್ಮತಿ ಪಡೆದು ಅಂತಿಮ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಆಗಮಿಸಿದ್ದು, ಈಗಾಗಲೇ ಸಚಿವರಾಗಿ ಆಯ್ಕೆ ಮಾಡಲಾದ ಎಲ್ಲಾರನ್ನು …

ಇಂದು ಬೆಳಿಗ್ಗೆ 11.45 ಕ್ಕೆ ಪ್ರಮಾಣ ವಚನ ಸ್ವೀಕಾರ Read More »

Translate »
Scroll to Top