ಬೆಂಗಳೂರು

ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ನೇರ ವೇತನ ಪಾವತಿ

ಬೆಂಗಳೂರು: ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5 ರ ಒಳಗಾಗಿ ನೇರ ವೇತನ ಪಾವತಿ ಮಾಡುವ ಜೊತೆಗೆ ಚಾಲಕರು, ಹೆಲ್ಪರ್ ಗಳು, ಕ್ಲೀನರ್ ಗಳನ್ನು ಪೌರ ಕಾರ್ಮಿಕರಂತೆ ಖಾಯಂಗೊಳಿಸಬೇಕೆಂದು ಆಗ್ರಹಿಸಿ ನಾರಾಯಣ [ಮೈಸೂರು] ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ ಪೌರ ಕಾರ್ಮಿಕರ ಮಹಾ ಸಂಘ ಬೃಹತ್ ಹಕ್ಕೊತ್ತಾಯ ಸಮಾವೇಶ ಆಯೋಜಿಸಲಾಗಿತ್ತು.

ರಾಯಚೂರಿನಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಜಾಗ ಗುರುತಿಸಲು ಸಚಿವ ಎನ್‌. ಎಸ್‌ ಬೋಸರಾಜು ಸೂಚನೆ

ಬೆಂಗಳೂರು: ರಾಯಚೂರು ನಗರದಲ್ಲಿ ಟ್ರಕ್ ಮತ್ತು ಲಾರಿಗಳ ಸಂಚಾರವನ್ನ ಸುಗಮಗೊಳಿಸುವ ನಿಟ್ಟಿನಲ್ಲಿ ಟ್ರಕ್ ಟರ್ಮಿನಲ್ ಅಗತ್ಯವಿದ್ದು, ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ಶೀಘ್ರ ಗುರುತಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್ ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದುಡ್ಡಿಗಾಗಿ ರೈತರು ಆತ್ಮಹತ್ಯೆ: ಶಿವಾನಂದ ಪಾಟೀಲ್ ಹೇಳಿಕೆಗೆ ಎಎಪಿ ತೀವ್ರ ಆಕ್ರೋಶ

5 ಲಕ್ಷ ಪರಿಹಾರ ಘೋಷಣೆ ಬಳಿಕ ರೈತರ ಆತ್ಮಹತ್ಯೆ ಹೆಚ್ಚಿದೆ ಎಂಬ ಜವಳಿ,ಕಬ್ಬು ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್ ಅವರ ಹೇಳಿಕೆಯನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ.

ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ

ಬೆಂಗಳೂರು: ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಬೃಹತ್ ಕೈಗಾರಿಕಾ ಇಲಾಖೆ ಅಧಿಕಾರಿಗಳ ಜತೆ ದಿನವಿಡೀ ಸಚಿವ ಎಂ ಬಿ ಪಾಟೀಲ ಸಭೆ

ಬೆಂಗಳೂರು: ಬೃಹತ್ ಕೈಗಾರಿಕಾ ಇಲಾಖೆಯಡಿ ಬರುವ ನಾನಾ ಉದ್ದಿಮೆಗಳು ಮತ್ತು ನಿಯಮಿತಗಳ ಜತೆ ಭಾರೀ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರವಿಡೀ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಸಂಬಂಧಿಸಿದ ಅಧಿಕಾರಿಗಳು, ಆಯುಕ್ತರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದಿಷ್ಟ ಹೊಣೆಗಾರಿಕೆಗಳನ್ನು ವಹಿಸಿ, ಅವೆಲ್ಲವನ್ನೂ ಕ್ಷಿಪ್ರ ಗತಿಯಲ್ಲಿ ಮಾಡುವಂತೆ ನಿಗದಿತ ಕಾಲಮಿತಿಗಳನ್ನೂ ವಿಧಿಸಿದರು.

ಭೂಗತ ವಿದ್ಯುತ್‍ ಪರಿವರ್ತಕ ಕೇಂದ್ರ ಉದ್ಘಾಟನೆ

ಬೆಂಗಳೂರು: ಮಲ್ಲೇಶ್ವರಂ 15ನೇ ಅಡ್ಡರಸ್ತೆಯ ಸಮೀಪ ಬೆವಿಕಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿರುವ, ದೇಶದಲ್ಲಿಯೇ ಮೊದಲ ಭೂಗತ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಸನ್ಮಾನ್ಯ ಇಂಧನ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರು ಉದ್ಘಾಟಿಸಿದರು.

ದೇಶಕ್ಕೆ ರಿಪಬ್ಲಿಕನ್  ಆಫ್ ಭಾರತ್ ಎಂದು  ಮರುನಾಮಕರಣ ಅಗತ್ಯವಿಲ್ಲ

ಬೆಂಗಳೂರು: ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ, ಜನರ ಸಮಸ್ಯೆ ಆಲಿಸಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿರುವ ಸಚಿವ ಕೃಷ್ಣ ಬೈರೇಗೌಡ ಅವರು, ಸಬ್ ರಿಜಿಸ್ಟ್ರಾರ್ ಕಚೇರಿಗಳು ಎಷ್ಟರ ಮಟ್ಟಿಗೆ ದಕ್ಷತೆಯಿಂದ ಜನಸ್ನೇಹಿ ಸೇವೆ ನೀಡುತ್ತಿದೆ ಎಂದು ಪರಿಶೀಲನೆ ನಡೆಸಿದರು. ಅಲ್ಲದೆ, ಒಂದು ಗಂಟೆಗೂ ಅಧಿಕ ಜನರ ಸಮಸ್ಯೆಗಳನ್ನು ಆಲಿಸಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ  ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ: ಪ್ರತಿಭಟನೆ ರದ್ದು

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು, ಕಾನೂನು ಚೌಕಟ್ಟು ಮೀರದಂತೆ ವೈಜ್ಞಾನಿಕ ರೀತಿಯಲ್ಲಿ ಪರಿಶೀಲಿಸಿ ಶೀಘ್ರವಾಗಿ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.

ಐಡಿಎಲ್ ಬ್ಲೈಂಡ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: 20 ವಿಶೇಷ ಶಿಕ್ಷಕರಿಗೆ ಸನ್ಮಾನ

ಬೆಂಗಳೂರು: ಐಡಿಎಲ್ ಬ್ಲೈಂಡ್ ಸ್ಕೂಲ್ ಗೆ 20 ವರ್ಷ ತುಂಬಿದ ಹಿನ್ನೆಲೆಯ ಜೊತೆಗೆ ವಿಶೇಷ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಯೋಜಿಸಲಾಗಿತ್ತು. ದಿವ್ಯಾಂಗರಿಗೆ ಬೋಧನೆ ಮಾಡುವ 20 ಮಂದಿಗೆ ವಿಶೇಷ ಅಂಧ ಶಿಕ್ಷಕರನ್ನು ಸನ್ಮಾನಿಸಲಾಯಿತು.

Translate »
Scroll to Top