ಬೆಳಗಾವಿ

ನೆರೆ ಹಾವಳಿಗೆ ತುತ್ತಾಗುವ ಗ್ರಾಮಗಳ ಸ್ಥಳಾಂತರ ಕುರಿತು ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಕೃಷ್ಣಾ ನದಿಯಲ್ಲಿ ಪ್ರವಾಹದಿಂದಾಗಿ ಪ್ರತಿ ಬಾರಿ ನೆರೆ ಹಾವಳಿಗೆ ತುತ್ತಾಗುವ ಗ್ರಾಮಗಳ ಜನರನ್ನು ಶಾಶ್ವತವಾಗಿ ಬೇರೆ ಕಡೆಗೆ ಸ್ಥಳಾಂತರಿಸುವ ಬೇಡಿಕೆ ಕುರಿತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಕಾಗವಾಡ ತಾಲೂಕಿನ ಜೂಗಳ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ:  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು.

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ  ಸಿದ್ದರಾಮಯ್ಯ

ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ ೪೬ ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ ೪೬ ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಪ್ರಸಾದದಲ್ಲಿ ಕಲುಷಿತ ಪದರ್ಥಂ ಸೇರಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

ಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ

ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ ರ್ನಾ ಟಕಕ್ಕೆ ನೀರು ಬಿಡಲು ಶಿಂಧೆ ಸಮ್ಮತಿ ನೀಡಿದ್ದಾರೆ.

ಪೆನ್ ಡ್ರೈವ್ ಸಿಎಂಗೆ ಹಸ್ತಾಂತರಿಸಿ ತನಿಖೆಗೆ ಸಹಕರಿಸಿ: HDKಗೆ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹತ್ವದ ದಾಖಲೆಯಿರುವ ಪೆನ್ಡ್ರೈವ್ ಇದೆ ಎಂದು ಪದೇ ಪದೇ ಹೇಳಿಕೊಳ್ಳುವ ಬದಲು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಅದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ, ತನಿಖೆಗೆ ಸಹಕರಿಸಬೇಕು ಎಂದು ಕೆಪಿಸಿಸಿ ಕರ್ಯಾಿಧ್ಯಕ್ಷ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಬೆಂಗಳೂರು ಬ್ಲಾಸ್ಟ್ ಬಗ್ಗೆ ಅಮಿತ್ ಶಾ ಗಂಭೀರ ಆರೋಪ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕೇಂದ್ರ ಗೃಹ ಸಚಿವ

ಚಿಕ್ಕೋಡಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಎಸ್ಡಿಪಿಐ ಕೈವಾಡ ಇದೆ ಎಂಬುದನ್ನು ರಾಷ್ಟ್ರೀಯ ತನಿಖಾ ದಳ ಬಯಲಿಗೆಳೆದಿದೆ. ಅಂಥ ಎಸ್ಡಿಪಿಐ ಸಹಕಾರ ಪಡೆದು ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದರು. ಬೆಳಗಾವಿಯ ಹುಕ್ಕೇರಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಈ ದೇಶಕ್ಕೆ ಅಂಟಿದ್ದ ಭಯೋತ್ಪಾದನೆಯನ್ನು ನರ್ಮೂಣಲನೆ ಮಾಡಿದರು. ಆದರೆ, ರ್ನಾ ಟಕದ ಕಾಂಗ್ರೇಸ್ ರ್ಕಾ ರ ಎಸ್ಡಿಪಿಐಯನ್ನು ಸರ್ಥನನೆ ಮಾಡಿಕೊಳ್ಳುತ್ತಿದೆ. ಎಸ್ಡಿಪಿಐ ಸಹಕಾರ ಪಡೆದು ಚುನಾವಣೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Translate »
Scroll to Top