ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್ ಸರ್ಕಾರ…?
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಬೆಂಗಳೂರು: “ತಮಿಳುನಾಡು 24 ಸಾವಿರ ಕ್ಯೂಸೆಕ್ ನೀರು ಬಿಡಲು ಪಟ್ಟು ಹಿಡಿದಿತ್ತು. ಈಗಿನ ಪರಿಸ್ಥಿತಿಯಲ್ಲಿ ಇಷ್ಟು ನೀರು ಬಿಡಲು ಅಸಾಧ್ಯ ಎಂದು ನಮ್ಮ ಅಧಿಕಾರಿಗಳು ವಾದ ಮಂಡಿಸಿದ್ದಾರೆ. ನಾವು 3 ಸಾವಿರ ಕ್ಯೂಸೆಕ್ ನೀರು ಬಿಡುವುದಾಗಿ ಹೇಳಿದೆವು. ಪರಿಣಾಮ ಪ್ರಾಧಿಕಾರ 5 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ದೇಶಿಸಿದೆ. ನಾವು ಅವರ ನಿರ್ಧಾರ ಗೌರವಿಸುತ್ತೇವೆ. ಅವರು ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅಧ್ಯಯನ ಮಾಡಲಿ ಎಂದು ಮನವಿ ಮಾಡಿದ್ದೇವೆ. ಅವರು ಬಂದು ಪರಿಶೀಲನೆ ಮಾಡಿ ವಾಸ್ತವಾಂಶ ಅರಿಯಲಿ.
ಮಂಡ್ಯ : ಕಾವೇರಿ ನದಿ ನೀರಿನ ಹಂಚಿಕೆ ಸಂಕಷ್ಟ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.
ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಮಂಡ್ಯದ ಹೊಸಹಳ್ಳಿ ಸರ್ಕಾರಿ ಶಾಲೆಯಲ್ಲಿ ಊಟ ಮಾಡಿದ ಶಿಕ್ಷಣ ಸಚಿವರು ಹಾಗೂ ಕೃಷಿ ಸಚಿವರು.
ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮದ ಬಳಿಕ ಊಟ.
ಮಕ್ಕಳಿಗೆ ಮೊಟ್ಟೆ ತಿನ್ನಿಸುವ ಮೂಲಕ ಅಧಿಕೃತವಾಗಿ ಕಾರ್ಯಕ್ರಮಕ್ಕೆ ಚಾಲನೆ.
ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಕೆ.ಆರ್.ಎಸ್ ಡ್ಯಾಂನ ಒಳವಹರಿವು ಬಾರಿ ಇಳಿಕೆ.
17,455 ಕ್ಯೂಸೆಕ್ ಗೆ ಇಳಿದ ಡ್ಯಾಂನ ಒಳಹರಿವು.
ನಿನ್ನೆ 32 ಸಾವಿರ ಇದ್ದ ಒಳಹರಿವು.
ಕಬಿನಿ ಜಂಗಲ್ ಲಾಜ್: ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.