ಭೀಕರ ರಸ್ತೆ ಅಪಘಾತ: 10 ಜನ ಸಾವು
ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಸುಮಾರು 10 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದಿದೆ.
ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಸುಮಾರು 10 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದಿದೆ.
ಮೈಸೂರು : ಮೈಸೂರಿನ ಹೊಸ ಕಾಮನಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ದೇವತೆ ಶ್ರೀ ಲಕ್ಷ್ಮಿದೇವಮ್ಮ ಕಂತಮ್ಮ ದೇವಾಲಯದ ಪ್ರತಿಷ್ಠಾಪನೆ, ಪೂಜಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.
ಮೈಸೂರು :ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಮ್ ಅವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್, ಸಂಸದ ಡಾ. ಎಲ್ . ಹನುಮಂತಯ್ಯ,ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಡಾ. ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರುಗಳಾದ ಕೆ.ಎಚ್. ಮುನಿಯಪ್ಪ, ಡಾ. ಎಚ್.ಸಿ. ಮಹಾದೇವಪ್ಪ, ಆರ್.ಬಿ. ತಿಮ್ಮಾಪುರ, ಶಿವಣ್ಣ, ಎಚ್. ಆಂಜನೇಯ ಹಾಜರಿದ್ದರು.
ಮೈಸೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಸ್ಲಿಂಮರ ಮಟನ್ ಸ್ಟಾಲ್, ಕಸಾಯಿಖಾನೆ ಮುಚ್ಚಲು ನೋಟಿಸ್ ಕೊಟ್ಟಿರುವ ವಿಚಾರ. ಕೇವಲ ಮುಸ್ಲೀಮರನ್ನೇ ಯಾಕೆ ಟಾರ್ಗೆಟ್ ಮಾಡ್ತಿರಾ. ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ. ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಿದ್ದರೆ ಮಾಡಿ. ಕಾನೂನು ಎಲ್ಲರಿಗೂ ಒಂದೇ.ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನ ಟಾರ್ಗೆಟ್ ಮಾಡಬೇಡಿ.ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಯಾರೆ ತಪ್ಪು ಮಾಡಿದ್ರು ಕ್ರಮ ತಗೊಳ್ಳಿ. ಒಂದು ವರ್ಗವನ್ನ ಟಾರ್ಗೆಟ್ ಮಾಡಿದರೆ ಮತ ದೃವೀಕರಣ ಆಗತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು …
ಮೈಸೂರು: ದಲಿತ ಹೋರಾಟಗಾರ, ಚಿಂತಕ, ಬರಹಗಾರ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿ ಕರೆದುಕೊಂಡು ಹೋಗುತ್ತಿದ್ದಾರೆಂದು ತಿಳಿದುಬಂದಿದೆ. ಹಳೆಯ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. 2017ರಲ್ಲಿ ಮಾಡಲಾದ ಪೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ರವೀಂದ್ರ ಅವರು 2019ರಿಂದಲೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬಂಧಿಸುವಂತೆ ಕೋರ್ಟ್ ಆದೇಶಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು …
ಚಿಂತಕ, ಬರಹಗಾರ, ಮೈಸೂರು ಜಿಲ್ಲೆಯ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ Read More »
ಮೈಸೂರು : ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೆ ಹಾಗೂ ರಾಜ್ಯ ಸರ್ಕಾರದ 40% ಕಮಿಷನ್ ಹಗರಣದ ತನಿಖೆ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಇಂದು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್, ನರೇಂದ್ರ ಸ್ವಾಮಿ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, …
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನಾ ಸಭೆ Read More »
ಮೈಸೂರು : ಮೈಸೂರು ವಿಶ್ವ ವಿದ್ಯಾಲಯ ಉದ್ಯೋಗಿಗಳ ಬಡಾವಣೆಯಲ್ಲಿ ಇಂದು ಬಸ್ ತಂಗುದಾಣ, ಸಿದ್ದರಾಮಯ್ಯ ವೃತ್ತದ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಶಾಸಕರಾದ ಜಿ.ಟಿ.ದೇವೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ಮತ್ತಿತರರು ಹಾಜರಿದ್ದರು.
ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮೊಳೆಯೂರು ಗ್ರಾಮದಲ್ಲಿ ಇಂದು ಸಿದ್ದರಾಮಯ್ಯ ಅವರು ಕನಕ ಭವನದ ಉದ್ಘಾಟನೆ ನೆರವೇರಿಸಿದರು. ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ತುಕಾರಾಂ ಮತ್ತಿತರರು ಹಾಜರಿದ್ದರು.
ಮೈಸೂರು : ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಆರಂಭಿಸಲಾಗಿದ್ದು ಹಲವರನ್ನು ಭೇಟಿ ಮಾಡಲಾಗುತ್ತಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಏಪ್ರಿಲ್ 11 ರಿಂದ 14ರವರೆಗೆ ಮೈಸೂರು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡಲಾಗುತ್ತದೆ. ಅಭ್ಯರ್ಥಿ ರವಿಶಂಕರ್ ಗೆ ಬೆಂಬಲ ನೀಡುವಂತೆ ಮಾಜಿ ಕುಲಪತಿ ರಂಗಪ್ಪ ಅವರಿಗೂ ಮನವಿ ಮಾಡಲಾಗಿದೆ ಎಂದು …
ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ಯುವಕನ ಕೊಲೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರೇ ಹೀಗೆ ಹೇಳಿಕೆ ಕೊಟ್ಟರೆ ಹೇಗೆ? ಅರೆಬರೆ ಮಾಹಿತಿ ಇಟ್ಟುಕೊಂಡು ಅತ್ಯಂತ ಬೇಜವಾಬ್ದಾರಿಯಿಂದ ಅವರು ಹೇಳಿಕೆ ನೀಡಿದ್ದಾರೆ” ಎಂದು ಕಟುವಾಗಿ ಟೀಕಿಸಿದರು. ಈ …
ಪ್ರಚೋದನಕಾರಿ ಹೇಳಿಕೆ ಕೊಟ್ಟ ಗೃಹ ಸಚಿವರ ವಿರುದ್ಧ ಹೆಚ್ʼಡಿಕೆ ಕಿಡಿ Read More »