ಘೋಷಿಸಿದ ಎಲ್ಲಾ ಯೋಜನೆಗಳು ಜಾರಿ
ಬೆಂಗಳೂರು: ರಾಜ್ಯಾದ್ಯಂತ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್,ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ,ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡುವುದು,ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ಸೇರಿದಂತೆ ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು,ಆ ಮೂಲಕ ಇಡೀ ದೇಶವೇ ನಿಬ್ಬೆರಗಾಗುವಂತೆ ಮಾಡಿದೆ.