ರಾಜಕೀಯ

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು : ಸಿ.ಎಂ.ಸಿದ್ದರಾಮಯ್ಯ

ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕಙ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.

ಲೋಕಸಭೆ ಚುನಾವಣೆ: ಶೇ.50 ರಷ್ಟು ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ: ಡಿಸಿಎಂ ಡಿ.ಕೆ.

“ಇಂದು ಸಂಜೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ

ಮಾದಕ ವ್ಯಸನಿಗಳ ಪತ್ತೆ, ಮಾದಕ ದ್ರವ್ಯ ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸುವ ಮೂಲಕ, ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ

ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ

ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಶಾಲೆ ನಮ್ಮ ಜವಾಬ್ದಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾಳಜಿಯ ಕ್ರಾಂತಿಕಾರಕ “ನಮ್ಮ ಶಾಲೆ ನಮ್ಮ ಜವಾಬ್ದಾರಿ”- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ಚಾಲನೆ

ನಾಸೀರ್ ಹುಸೇನ್‍ರನ್ನು ಅಪರಾಧಿ ಎಂದು ಪರಿಗಣಿಸಿ ವಿಜಯೇಂದ್ರ ಒತ್ತಾಯ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್ಐಆರ್ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು

ಸಕಾಲ ಅರ್ಜಿ ಸ್ವೀಕೃತಿಯಿಂದ-ಸೇವೆಯವರೆಗೆ ಎಲ್ಲವನ್ನೂ ಡಿಜಿಟಲೀಕರಣಗೊಳಿಸಿ : ಕೃಷ್ಣ ಬೈರೇಗೌಡ

“ಸಕಾಲ”ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ತಿರುಪತಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ಪ್ರಗತಿ ಪರಿಶೀಲನೆ.

ರಾಜ್ಯದ ಭಕ್ತಾದಿಗಳಿಗೆ ತಿರುಪತಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ವಸತಿಗೃಹ ಕಾಮಗಾರಿಯನ್ನ ಮುಜರಾಯಿ ಸಚಿವ ರಾಮಲಿಂಗಾರೆರೆಡ್ಡಿ ಅವರು ಪ್ರಗತಿ ಪರಿಶೀಲನೆ ಮಾಡಿದರು.

Translate »
Scroll to Top