ರಾಜ್ಯ

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ

ಬೆಂಗಳೂರು: ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ಬೆಂಗಳೂರಿನಲ್ಲಿ ಪ್ರಕಟಿಸಿದರು.

ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು : ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದ ದಲ್ಲಿ ಇಂದು ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಬಿಜೆಪಿ, ಜೆಡಿಎಸ್ ನವರ ಸುಳ್ಳುಗಳಿಗೆ ಅಧಿಕೃತ ದಾಖಲೆಗಳ ಮೂಲಕ ಪ್ರತ್ಯುತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ+ಜೆಡಿಎಸ್ ನಡೆಸಿದ ಜಂಟಿ ಡ್ರಾಮಾಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಕಿವಿ ಹಿಂಡಿದ ಸಿಎಂ

ಹೇಡಿಯಂತೆ ಪಲಾಯನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ತಿಳಿಸಿದರು.

ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಯಕೃತ್‌ ದಾನ:  ಯಶಸ್ವಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಯಕೃತ್ ಕ್ಯಾನ್ಸರ್ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ.

ಎರಡು ದಿನಗಳ ದಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾ ಪ್ರಾದೇಶಿಕ ಸಮ್ಮೇಳನ

ಬೆಂಗಳೂರು: ಕೇಂದ್ರದ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಬರುವ ದಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾದಿಂದ ಬೆಂಗಳೂರಿನಲ್ಲಿ ಶುಕ್ರವಾರದಿಂದ ಎರಡು ದಿನಗಳ 48ನೇ ಕಂಪನಿ ಸೆಕ್ರೇಟರಿಗಳ ಪ್ರಾದೇಶಿಕ ಸಮಾವೇಶ ನಡೆಯಲಿದೆ.

ಜು. 28 ರಂದು ಬಸವನಗುಡಿಯಲ್ಲಿ ಹಿಂಗುಳಾಂಬಿಕ ಮಾತೆಯ ಗೋಂದಳ ಕಾರ್ಯಕ್ರಮ

ಬೆಂಗಳೂರು: ಭಾವಸಾರ ಕ್ಷತ್ರಿಯ ಜನಾಂಗದ ಕುಲದೇವತೆ ಶ್ರೀ ಹಿಂಗುಳಾಂಬಿಕ ಮಾತೆಯ ಪೂಜೆ, ಆರಾಧನೆ ಮತ್ತು ಗೋಂದಳ ಕಾರ್ಯಕ್ರಮವನ್ನು ಜು.28 ರಂದು ಬಸವನಗುಡಿಯ ಭವಾನಿ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಭ್ರಷ್ಟ ಹಾಗೂ ಸ್ವಜನ ಪಕ್ಷಪಾತಿ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬೆಂಗಳೂರು : ಸಿದ್ದರಾಮಯ್ಯ ನವರು ಭಾಗಿಯಾಗಿರುವ ಮೈಸೂರು ಮೂಡಾ ಹಗರಣ ಖಂಡಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಸೇರಿದಂತೆ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದರು.

ವಿರೋಧ ಪಕ್ಷಗಳ ಧರಣಿ ನಾಟಕವಷ್ಟೆ- ಹೆಚ್ ಕೆ ಪಾಟೀಲ್ ಹೇಳಿಕೆ

ಬೆಂಗಳೂರು : ಇಂದು ವಿಧಾನಸೌಧದಲ್ಲಿ ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್, ವಿಪಕ್ಷಗಳ ಧರಣಿ ಕುರಿತು ಅಸಮಾಧಾನ ವ್ಯಕ್ತ ಪಡಿಸಿದರು.

Translate »
Scroll to Top