ವಿಧಾನಸೌಧ ಅಧಿವೇಶನ

ನಾಸೀರ್ ಹುಸೇನ್‍ರನ್ನು ಅಪರಾಧಿ ಎಂದು ಪರಿಗಣಿಸಿ ವಿಜಯೇಂದ್ರ ಒತ್ತಾಯ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ ಎಂದು ಎಫ್ಐಆರ್ನಲ್ಲಿ ಸೇರಿಸಬೇಕು. 3 ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು

ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದೆ.

ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ.

ತುಂಗಭದ್ರಾ ನದಿ ನೀರು ಮತ್ತು ಮಣ್ಣಿನಲ್ಲಿ ಅಲ್ಯುಮಿನಿಯಂ ಲೋಹ ಪತ್ತೆ ಆತಂಕಕಾರಿ ವಿಷಯ : ವೈ.ಎಂ. ಸತೀಶ್

ಬೆಂಗಳೂರು : ಕರ್ನಾಟದಕ ಎಲ್ಲಾ ನದಿಗಳ ಎರೆಡೂ ದಡಗಳ 3, 5 ಅಥವಾ 10 ಕಿಲೋ ಮೀಟರ್ ವ್ಯಾಪ್ತಿಯನ್ನು `ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಣೆ ಮಾಡಿ ನದಿ ನೀರಿನ ಮತ್ತು ಮಣ್ಣಿನ ಶುದ್ಧತೆಯನ್ನು ಕಾಪಾಡಲು ಸರ್ಕಾರ ಪ್ರಥಮ ಆದ್ಯತೆ ನೀಡಬೇಕು ಎಂದು ಬಳ್ಳಾರಿ – ವಿಜಯನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಆಗ್ರಹಿಸಿದ್ದಾರೆ.

ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿರುವುದರ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾವು ಸೀತಾರಾಮ್ ಎನ್ನುವವರು. ನಮ್ಮ ಊರಿನಲ್ಲಿ ನಾನು ಎರಡೆರಡು ರಾಮ ಮಂದಿರ ಕಟ್ಟಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು

ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ?: ಸಿಎಂ ಪ್ರಶ್ನೆ

ಬೆಂಗಳೂರು: ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ. ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿ. ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯದ ವಿರುದ್ಧ ನಿರ್ಣಯ ಮಂಡನೆಗೆ ಬಿಜೆಪಿ ಬೆಂಬಲ ನೀಡಲಿ: ಡಿ ಕೆ ಶಿವಕುಮಾರ್

ಬೆಂಗಳೂರು : “ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದೇವೆ. ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ನಿಲ್ಲಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಸಂಡೂರು, ಕೊಟ್ಟೂರು ಕೆರೆಗಳ ನೀರು ಭರ್ತಿ ಸೇರಿ ಕುಡಿಯುವ ನೀರಿನ ಯೋಜನೆಗಳ ಜಾರಿಗೆ ವೈ.ಎಂ. ಸತೀಶ್ ಆಗ್ರಹ

ಬೆಂಗಳೂರು : ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳು ಮತ್ತು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಕರ್ನಾಟಕ ನೀರಾವರಿ ನಿಗಮದ ಪರಿಶೀಲನೆಯ ಹಂತದಲ್ಲಿದ್ದು, ಅನುದಾನದ ಲಭ್ಯತೆ ಆಧರಿಸಿ ಕಾಮಗಾರಿಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉತ್ತರ ನೀಡಿದ್ದಾರೆ.

Translate »
Scroll to Top