ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ
ವಿಜಯಪುರ : ಜಿಲ್ಲೆಯ ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಸಂಗಾಪುರ ಗ್ರಾಮದಲ್ಲಿ ಇಂದು ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ ಅವರು ಯಾತ್ರಿ ನಿವಾಸವನ್ನು ಲೋಕಾರ್ಪಣೆ ಮಾಡಿದರು. ಕ್ಷೇತ್ತದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಠಾಧೀಶರಾದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ, ಮಾಜಿ ಸಚಿವರಾದ ಅಪ್ಪಾಜಿ ನಾಡಗೌಡ, ಶಾಸಕರಾದ ಆನಂದ ನ್ಯಾಮಗೌಡ, ಸುನಿಲ್ ಪಾಟೀಲ್, ಪ್ರಕಾಶ್ ರಾಥೋಡ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರು ಹಾಜರಿದ್ದರು.