ಶ್ರೀ ಕೃಷ್ಣ ವಿದ್ಯಾ ಸಮೂಹ ಸಂಸ್ಥೆಯಿಂದ ಐದು ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಹಸ್ತಾಂತರ
ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದುವರೆಸುವ ಜೊತೆಗೆ ಕಾರ್ಪೋರೇಟ್ ಸಂಸ್ಥೆಗಳ ಸಿ.ಎಸ್.ಆರ್ ನಿಧಿಯಿಂದ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಪಿ.ಇ.ಎಸ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಂ.ಆರ್. ದೊರೆಸ್ವಾಮಿ ಹೇಳಿದ್ದಾರೆ.